ವಿಜಯಪುರ: ದೇವರಹಿಪ್ಪರಗಿ ಬಳಿಯ ದೇವೂರ ಹಳ್ಳದ ಸೇತುವೆ ದಿಢೀರ್ ಕುಸಿದಿದ್ದು ವಾಹನ ಸಂಚಾರ ಏರುಪೇರಾಗಿದೆ.ಶುಕ್ರವಾರ ಹಳ್ಳದ ಸೇತುವೆಯ ಮಧ್ಯ ಭಾಗದಲ್ಲಿ ಭಾರಿ ಗಾತ್ರದ ಗುಂಡಿ ಬಿದ್ದಿದೆ. ಇದರಿಂದಾಗಿ ತಾಳಿಕೋಟಿ ದೇವರಹಿಪ್ಪರಗಿ ಮಧ್ಯೆ ರಸ್ತೆ ಸಂಚಾರ ಬಹುತೇಕ ಸ್ಥಗಿತಗೊಂಡಿದೆ.ಸೇತುವೆ ಮೇಲೆ ದ್ವಿಚಕ್ರ ವಾಹನಗಳು ಹೊರತಾಗಿ ಇತರೆ ವಾಹನ ಸಂಚಾರ ಸಂಪೂರ್ಣ ಅಪಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ- MUDA ಸೈಟ್ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆಯೇ?ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಸುದ್ದಿಯೊಂದು ಹರಿದಾಡುತ್ತಿದೆ. ಮುಡಾ ನಿವೇಶನ ಹಂಚಿಕೆ ಕ್ರಮದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ ಎನ್ನಲಾಗುತ್ತಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಅಬ್ರಹಾಂ ಅವರಿಗೆ ರಾಜ್ಯಪಾಲರ ಕಚೇರಿಯಿಂದ ಕರೆ ಹೋಗಿದೆ ಎನ್ನಲಾಗಿದೆ. ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಶನಿವಾರ ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ಬರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ....
ಮಂಗಳೂರು: ಮಂಗಳೂರು ಲೋಕೋಪಯೋಗಿ ವಿಭಾಗದ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಗ್ರಾಮದ ಅಡ್ಡೂರು-ಪೊಳಲಿ ಸೇತುವೆ ಶಿಥಿಲಗೊಂಡು ಘನವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಮುಂಜಾಗೃತ ಕ್ರಮದಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ.ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರ ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ರಮಕೈಗೊಂಡು ಮತ್ತು ತಜ್ಞರ ತಂಡದಿಂದ ಸೇತುವೆಯ ದೃಢತೆಯ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಅಮರನಾಥ ಜೈನ್, ಅಪರ ಜಿಲ್ಲಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು....
ಬೆಂಗಳೂರು: "ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು "ಸ್ವಾತಂತ್ರ ಹೋರಾಟದಲ್ಲಿ ಸುಮಾರು 6.5 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ ಎಂಬುದು ನಮ್ಮ ಹೆಗ್ಗಳಿಕೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಧೈರ್ಯದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂದು ಹೇಳಬೇಕು" ಎಂದರು."ಶಾಮ ಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳುವಳಿ ಹತ್ತಿಕ್ಕಬೇಕು ಎಂದು ಬ್ರಿಟಿಷರಿಗೆ ಪತ್ರ ಬರೆದಿದ್ದರು. ಇವರ ಹಿಂಬಾಲಕರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಕೇಳುತ್ತಾರೆ. ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿರುವ ಸಾರ್ವಜನಿಕ ವಲಯ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದೇ ಕಾ...
ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ.https://youtu.be/DmTtTvOepMg?si=OqLdwg-tIeZMHTt5ಜಗದಾಂಬೆ ಶ್ರೀ ಕಟೀಲೇಶ್ವರಿಯು ಸ್ವಾತಂತ್ರ್ಯ ದಿನವಾದ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಕಳೆದ ವರ್ಷದಂತೆಯೇ ಈ ವರ್ಷವೂ ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹಕ್ಕೆ ರಾಷ್ಟ್ರಧ್ವಜವನ್ನು ಹೋಲುವ ಬಣ್ಣದ ವಸ್ತ್ರಾಲಂಕಾರ ಮಾಡಲಾಗಿದೆ. ಈ ಅಲಂಕಾರ ಭಕ್ತರ ಕುತೂಹಲದ ಕೇಂದ್ರಬಿಂದುವಾಗಿದೆ.ಕರಾವಳಿಯ ಪುಣ್ಯಕ್ಷೇತ್ರ ಕಟೀಲಿನಲ್ಲಿ ದೇಶಭಕ್ತಿಯ ಮಹಾ ಹಬ್ಬವನ್ನು ಆಚರಿಸಲಾಯಿತು. ಹಿಂದೂ ಧಾರ್ಮಿಕ ಹಬ್ಬಗಳಂದು ವಿಶೇಷ ಕೈಂಕರ್ಯಗಳಿಂದ ಭಕ್ತರನ್ನು ಕೈಬೀಸಿ ಕರೆಯುವ ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಈ ರೀತಿಯ ಆಕರ್ಷಣೆ ಭಕ್ತ ಸಮೂಹದ ಮೆಚ್ಚುಗೆಗೂ ಪಾತ್ರವಾಗಿದೆ....
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿ, ಗೌರವ ವಂದನೆ ಸ್ವೀಕರಿಸಿದರು....
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಮನೆಮನೆಗಳಲ್ಲೂ ತಿಂರಂಗ ಧ್ವಜ ಹಾರಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿರುವ ಹರ್ ಘರ್ ತಿರಂಗ ಅಭಿಯಾನಕ್ಕೂ ಭಾರೀ ಬೆಂಬಲ ವ್ಯಕ್ತವಾಗಿದೆ.ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು.ಶಾಲೆಗಳಲ್ಲಿ, ಸಂಘಸಂಸ್ಥೆಗಳಲ್ಲೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ಗಮನಸೆಳೆದವು....
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್, ಗೆಳತಿ ಪವಿತ್ರಾ ಗೌಡ ಸಹಿತ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಬುಧವಾರ ಈ ಆದೇಶ ನೀಡಿದೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಬುಧವಾರ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾದಿಶರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ಆದೇಶಿಸಿದರು....
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ19 ಪೊಲೀಸರಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಗಣನೀಯ ಸೇವೆಯನ್ನು ಪರಿಗಣಿಸಿ ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಪ್ರಕಟಿಸುತ್ತದೆ. ಅದರಂತೆ ಈ ಬಾರಿ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ಈ ಪದಕ ಪ್ರಕಟವಾಗಿದೆ.
ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ.ಎಂ.ಚಂದ್ರಶೇಖರ್, ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ.ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ
ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ
ಎಂ.ಡಿ. ಶರತ್, ಎಸ್‌ಪಿ, ಸಿಐಡಿ, ಬೆಂಗಳೂರು
ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್, ಪಶ್ಚಿಮ, ಬೆಂಗಳೂರು ನಗರ
ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ
ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ
ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ರಾಜ್ಯ ಗುಪ್ತವಾರ್ತೆ, ಕಲ...
ಬೆಂಗಳೂರು:ಕಮೀಷನ್ ಆಸೆಗಾಗಿ ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಬಲಿಯಾಗುತ್ತಿವೆಯೇ? ರಾಜ್ಯ ಸರ್ಕಾರದ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅನುಮಾನ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತ...