Saturday, August 8

ರಾಜ್ಯ

ಬಿಡದಿ ಟೌನ್‌ಶಿಪ್‌ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ

ಬಿಡದಿ ಟೌನ್‌ಶಿಪ್‌ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಆತಂಕಗಳನ್ನು ಆಲಿಸಲು ಬೈರಮಂಗಲಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದಲ್ಲದೆ, ಅದರ ವಿವರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಬಿಡದಿ ಟೌನ್‌ಶಿಪ್ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಕಳವಳಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಬೈರಮಂಗಲಕ್ಕೆ ಆಹ್ವಾನಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಪತ್ರ ಬರೆದಿರುವುದಾಗಿ ಹೇಳಿರುವ ಅವರು, “ಈ ಹಿಂದೆ ತಿಳಿಸಿದಂತೆ ಜೂನ್ 27, 2026ರಂದು ನಾನು ಬೈರಮಂಗಲದಲ್ಲಿ ರೈತರು ಹಾಗೂ ಇತರ ಬಾಧಿತ ಪಾಲುದಾರರೊಂದಿಗೆ ಸಂವಾದ ನಡೆಸಲು ಲಭ್ಯವಿರುತ್ತೇನೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕ ಮನೋಭಾವದಿಂದ ಸ್ಪಂದಿಸಿ, ಜನರ ಸಮಸ್ಯೆಗಳನ್ನು ಅವರಿರ...
ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ

ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಕ್ಷದ ಹಿರಿಯ ನಾಯಕರ ಸಲಹೆಯಂತೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ವಿವಿಧ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಈ ವೇಳೆ ಅವರೊಂದಿಗೆ ಒಬ್ಬ ಸಂಸದ, ಎಂಟು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಧರ್ಮಸ್ಥಳ ಕ್ಷೇತ್ರದ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳಿಗೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂರ್ಣವಿರಾಮ ಇಟ್ಟಿರುವುದಾಗಿ ಹೇಳಿದರು."ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ವಿಚಾರ ನನಗೆ ಮಾತ್ರವಲ್ಲ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೂ ತೀವ್ರ ನೋವು ಮತ್ತು ಆಘಾತ ಉಂಟುಮಾಡಿದೆ. ನಾನು ಭಾವನಾತ್ಮಕ ವ್ಯಕ್ತಿಯಾಗಿರುವ ಕಾರಣ ಸತ್ಯಾಸತ್ಯತೆ ಹೊರಬರಲಿ ಎಂಬ ಉದ್ದೇಶದಿಂದ ಧರ್ಮ...
ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ ಮತ್ತು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟೆಂಡರ್ ಟುಡೆ ಗ್ರೂಪ್ ಅಧ್ಯಕ್ಷ ಶ್ರೀಹರಿ ಎನ್. ಗೌರಿಪುರ, ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದು, 80ಕ್ಕೂ ಹೆಚ್ಚು ಕಂಪನಿಗಳು ತಮ್ಮ ಉತ್ಪನ್ನಗಳು ಮತ್ತು ತಾಂತ್ರಿಕ ಆವಿಷ್ಕಾರಗಳನ್ನು ಪ್ರದರ್ಶಿಸಲಿವೆ ಎಂದು ತಿಳಿಸಿದರು. ಕಾಫಿ ಬೆಳೆಗಾರರಿಗೆ ಉಪಯುಕ್ತವಾಗುವ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳು ಹಾಗೂ ಆಧುನಿಕ ಕೃಷಿ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಕಾಫಿ ತೋಟಗಳಲ್ಲಿ ಎದುರಾಗುತ್ತಿರುವ ಕಾರ್ಮಿಕರ ಕೊರತೆಗೆ ಪರಿಹಾರವಾಗುವ ಯಂತ್ರೋಪಕರಣಗಳ ಪ್ರದರ್ಶನವೂ ಸಮಾವೇಶದ ಪ್ರಮುಖ ಆಕರ್ಷಣೆಯಾಗಿರಲಿದೆ ಎಂದು ಹೇಳಿದರು.ಮಡಿಕೇರಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಕಾಫಿ ಬೆಳೆಗಾರರ ಸಂಘಗಳು ಈ ...
ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಫೋಟೋ ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಮುತ್ತುರಾಯ ಸ್ವಾಮಿ ದೇವಾಲಯಕ್ಕೆ ಕುಟುಂಬ ಸದಸ್ಯರು ಭೇಟಿ ನೀಡಿದ್ದರು. ದೇವಾಲಯ ದರ್ಶನದ ಬಳಿಕ ಕಾವೇರಿ ನದಿ ತೀರದಲ್ಲಿ ನಿಂತು ಫೋಟೋ ತೆಗೆಯುವ ಸಂದರ್ಭದಲ್ಲಿ ಅಜಾಗರೂಕತೆಯಿಂದ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತರನ್ನು ಚನ್ನಪಟ್ಟಣ ಮೂಲದ ವಿಜಯಮ್ಮ, ಚೈತ್ರ, ಶ್ವೇತಾ, ಪ್ರಿಯಾಂಕ ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮುತ್ತತ್ತಿ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ....
ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

ಗೃಹ ಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಪ್ರಿಯಾಂಕ್?

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಗೃಹಸಚಿವರಿಂದಲೇ ಸಂಚಾರ ನಿಯಮ ಉಲ್ಲಂಘನೆ..? ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡಿದ್ದಾರೆಯೇ ಗೃಹಸಚಿವ ಪ್ರಿಯಾಂಕ ಖರ್ಗೆ? ಈ ಕುರಿತಂತೆ ಪ್ರತಿಪಕ್ಷ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೋಸ್ಟ್ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧಿಕೃತ ವಾಹನದ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ದಂಡ ಬಾಕಿ ಉಳಿದಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರವು ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಇರುವ ಇ-ಚಲನ್ ದಂಡಗಳ ಮೇಲೆ ಶೇ.50 ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ಈ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ, “ಸಂಚಾರ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವ ಗೃಹ ಸಚಿವರ ವಾಹನವೇ ನಿಯಮ ಉಲ್ಲಂಘಿಸಿದೆ” ಎಂದು ವ್ಯಂಗ್ಯವಾಡಿದೆ.ಬಿಜೆಪಿ ಕರ್ನಾಟಕ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಸಚಿವರ ಅಧಿಕೃತ ವಾಹನ ಎಂದು ಹೇಳಲಾದ KA42 GA 0099 ಸಂಖ್ಯೆಯ ಕಾರಿ...
‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯವು ಈಗ ಮಾದಕ ವಸ್ತುಗಳ ವ್ಯಾಪಾರದ ಕಾರ್ಖಾನೆಯಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ರಾಜ್ಯದ ಮಾದಕ ವಸ್ತುಗಳ ಜಾಲವನ್ನು ಕೆಡವಿ. ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ X ನಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಭಾರೀ ಚರ್ಚೆಗೆ ಮುನ್ನುಡಿ ಬರೆದಂತಿದೆ. 'ಕರ್ನಾಟಕ ರಾಜ್ಯವು ಈಗ ಮಾದಕ ವಸ್ತುಗಳ ವ್ಯಾಪಾರದ ಕಾರ್ಖಾನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಮಾದಕ ವಸ್ತುಗಳ ಪ್ರವಾಹವು ಶಾಲಾ ಮತ್ತು ಕಾಲೇಜು ಆವರಣಗಳಿಗೆ ಹರಡಿದೆ' ಎಂದು ಬಿಜೆಪಿ ಬೊಟ್ಟು ಮಾಡಿದೆ. ಒಂದು ಕಡೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ಅಭಿಯಾನಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರತರಾಗಿದ್ದರೆ, ಮತ್ತೊಂದೆಡೆ, ಮಾದಕ ವಸ್ತುಗಳ ಮಾರಾಟಗಾರರು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿರ್ಲಜ್ಜವಾಗಿ ತಮ್ಮ ವ್ಯವಹಾರವನ್ನು ನಡೆಸುತ್ತಿದ್ದಾರೆ ಎಂದು ದೂರಿರುವ ಬಿಜೆಪಿ, 'ಗೃಹ ಸಚಿವರೇ, ಅಧಿಕಾರವನ್ನು ಅನುಷ್ಠಾನಗೊಳಿಸುವತ್ತ ನಿಮ್ಮ ಗಮನವನ್ನು ಕಡಿಮೆ ಮಾಡಿ ಮತ್ತ...
ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಮಧ್ಯಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವ ಕುರಿತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಪ್ರದೇಶ ವಿಧಾನಸಭೆಯ ಸಂಖ್ಯಾಬಲದ ಪ್ರಕಾರ ಕಾಂಗ್ರೆಸ್‌ಗೆ ಒಂದು ರಾಜ್ಯಸಭಾ ಸ್ಥಾನ ಗೆಲ್ಲುವ ಅವಕಾಶವಿದ್ದರೂ, ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ರಾಜಕೀಯ ಕುತಂತ್ರ ನಡೆಸಿದೆ ಎಂದು ಆರೋಪಿಸಿದರು. ಬಿಜೆಪಿಗೆ ಅಗತ್ಯ ಸಂಖ್ಯಾಬಲ ಇರದಿದ್ದರೂ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕುದುರೆ ವ್ಯಾಪಾರ ನಡೆಸುವ ಉದ್ದೇಶವೇ ಇದಾಗಿತ್ತು ಎಂದು ಹೇಳಿದರು. ತಮ್ಮ ನಾಮಪತ್ರ ತಿರಸ್ಕಾರ ಪ್ರಕರಣವನ್ನು ಉಲ್ಲೇಖಿಸಿದ ಅವರು, 2023ರ ಚುನಾವಣಾ ಆಯೋಗದ ನಿಯಮಾವಳಿಯ ಪ್ರಕಾರ ಅಫಿಡವಿಟ್‌ನಲ್ಲಿನ ತಾಂತ್ರಿಕ ಲೋಪಗಳ ಆಧಾರದಲ್ಲಿ ನಾಮಪತ್ರ ತಿರಸ್ಕರಿಸಬಾರದು ಎಂದು ತಿಳಿಸಿದರು. ಆದರೆ ಮಧ್ಯಪ್ರದೇಶದಲ್ಲಿ ತಮ್ಮ ನಾಮಪತ್ರವನ್ನು ತಿರಸ್ಕರಿಸಲಾಗಿದ್ದು, ಇದೇ ರೀತಿಯ ಪ್ರಕರಣದಲ್ಲಿ ಜಾರ್ಖಂಡ್‌ನ ಅಭ್ಯರ್ಥಿಗೆ ತಿದ್ದ...
ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಪ್ರಸ್ತುತ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆ, ಹೈಕಮಾಂಡ್‌ನ ತೀರ್ಮಾನದಂತೆ ಮುಂದುವರಿಯಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೂನ್ 28ರಂದು ವಿದೇಶ ಪ್ರವಾಸದಿಂದ ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ಅವರ ಆಗಮನದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಹಲವು ಶಾಸಕರು ಮತ್ತು ನಾಯಕರು ಲಾಬಿ ನಡೆಸುತ್ತಿದ್ದಾರೆ. ಸಲೀಂ ಅಹ್ಮದ್, ಅಶೋಕ್ ಪಟ್ಟಣ ಹಾಗೂ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ...
ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (ಕಾಡುಗೋಡಿಯಿಂದ ಚಲ್ಲಘಟ್ಟ) ರೈಲು ಸಂಚಾರ ಸಂಪೂರ್ಣವಾಗಿ ಪುನರಾರಂಭಗೊಂಡಿದ್ದು, ಪ್ರಯಾಣಿಕರ ಆತಂಕಕ್ಕೆ ತೆರೆ ಬಿದ್ದಿದೆ. ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ‘ಥರ್ಡ್ ರೈಲ್ ಸಿಸ್ಟಮ್’ನ ಕರೆಂಟ್ ಕಲೆಕ್ಟರ್ ಶೂನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಮೆಜೆಸ್ಟಿಕ್ ಮತ್ತು ಎಂ.ಜಿ. ರಸ್ತೆ ನಡುವಿನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಇದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದರು.ಬಿಎಂಆರ್‌ಸಿಎಲ್ ತಾಂತ್ರಿಕ ತಂಡಗಳು ರಾತ್ರಿಯಿಡೀ ದುರಸ್ತಿ ಕಾರ್ಯ ನಡೆಸಿ, ಬುಧವಾರ ಮುಂಜಾನೆ 3:30ರ ವೇಳೆಗೆ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಿವೆ. ಇದಾದ ಬಳಿಕ ನಿಗದಿತ ವೇಳಾಪಟ್ಟಿಯಂತೆ ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಿದ್ದು, ಕಾಡುಗೋಡಿಯಿಂದ ಚಲ್ಲಘಟ್ಟದವರೆಗಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ಯಾವುದೇ ವ್ಯತ್ಯಯವಿಲ್ಲದೆ ಸೇವೆ ಮುಂದುವರಿದಿದೆ. ಕಚೇರಿ ಹಾಗೂ ದೈನಂದಿನ ಕಾರ್ಯಗಳಿಗೆ ತೆರಳುವ ಸಾರ್ವಜನಿಕರು ಇದೀಗ ನಿರಾತಂಕವಾಗಿ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳ...
ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಕುರಿತು ವರಿಷ್ಠರಿಗೆ ವರದಿ ನೀಡಲು ನವದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ಹೈಕಮಾಂಡ್ ತೀವ್ರ ತರಾಟೆ ತೆಗೆದುಕೊಂಡಿದೆ ಎನ್ನಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲೇ ಚುನಾವಣಾ ಸಿದ್ಧತೆ ಮತ್ತು ಮತದಾನ ನಿರ್ವಹಣೆ ಕುರಿತು ರಾಜ್ಯ ನಾಯಕರಿಂದ ವಿವರವಾದ ಮಾಹಿತಿ ಪಡೆಯಲಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು, ಚುನಾವಣೆ ಘೋಷಣೆಯಾದ ಬಳಿಕ ಎಷ್ಟು ಸಭೆಗಳನ್ನು ನಡೆಸಿದ್ದೀರಿ, ಶಾಸಕಾಂಗ ಪಕ್ಷದ ಸಭೆ ಯಾವಾಗ ಆಯೋಜಿಸಿದ್ದೀರಿ, ಮತಗಳ ಹಂಚಿಕೆ ಹೇಗೆ ಮಾಡಿದ್ದೀರಿ, ಶಾಸಕರಿಗೆ ವಿಪ್ ಯಾವಾಗ ನೀಡಿದ್ದೀರಿ ಹಾಗೂ ಜೆಡಿಎಸ್ ಜತೆ ಎಷ್ಟು ಬಾರಿ ಸಮನ್ವಯ ಸಭೆ ನಡೆಸಿದ್ದೀರಿ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಇದೇ ವೇಳೆ, ಅಡ್ಡ ಮತದಾನದ ಸಾಧ್ಯತೆ ಬಗ್ಗೆ ಅನುಮಾನ ಇದ್ದ ಶಾಸಕರೊಂದಿಗೆ ಹೆಚ್ಚುವರಿ ಮಾತುಕತೆ ನಡೆಸಲಾಗಿತ್ತೇ, ಶಾಸಕಾಂಗ ಪಕ್ಷದ ಸಭೆಯನ್ನು ಎರಡು-ಮೂರು ದಿನ ಮುಂಚಿತವಾಗಿ ನಡೆಸಬಹು...