
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಆರಂಭಿಸಿದ ಸಹಿ ಅಭಿಯಾನವನ್ನು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು “ಅನುಚಿತ, ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ.
“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಸಂಸದೀಯ ವ್ಯವಸ್ಥೆ” ಎಂಬ ವಿಷಯದ ಕುರಿತಂತೆ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಸಹಿ ಅಭಿಯಾನವು ಸಂಪೂರ್ಣವಾಗಿ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರ ನಡೆ ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ರಿಜಿಜು ಅಭಿಪ್ರಾಯಪಟ್ಟರು. “ಅವರು ಹುದ್ದೆಯಲ್ಲಿ ಇದ್ದಾಗಲೂ ಸೈದ್ಧಾಂತಿಕವಾಗಿ ಪಕ್ಷಪಾತ ಹೊಂದಿದ್ದಿರಬಹುದು” ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದನ್ನು ಖಂಡಿಸಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಅವರು ತೆರೆದ ಟೀಕೆಗೆ ಒಳಪಡಿಸಿದರ...