Friday, September 18

ರಾಜ್ಯ

ಹಿಂದುತ್ವ ದುರ್ಬಲವಾದರೆ ರಾಷ್ಟ್ರ ದುರ್ಬಲ; ಗಣೇಶೋತ್ಸವದಲ್ಲಿ ಜಾತೀಯತೆ, ಅಸ್ಪೃಶ್ಯತೆಗೆ ಅವಕಾಶ ಇರಬಾರದು: ಸಿ.ಟಿ.ರವಿ

ಹಿಂದುತ್ವ ದುರ್ಬಲವಾದರೆ ರಾಷ್ಟ್ರ ದುರ್ಬಲ; ಗಣೇಶೋತ್ಸವದಲ್ಲಿ ಜಾತೀಯತೆ, ಅಸ್ಪೃಶ್ಯತೆಗೆ ಅವಕಾಶ ಇರಬಾರದು: ಸಿ.ಟಿ.ರವಿ

ಪ್ರಮುಖ ಸುದ್ದಿ, ರಾಜ್ಯ
ಮದ್ದೂರು: ಹಿಂದುತ್ವ ದುರ್ಬಲವಾದರೆ ರಾಷ್ಟ್ರವೂ ದುರ್ಬಲವಾಗುತ್ತದೆ. ಗಣೇಶೋತ್ಸವ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಹಿಂದೂ ಸಮಾಜದಲ್ಲಿ ಒಗ್ಗಟ್ಟು, ಸಾಮರಸ್ಯ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ವೇದಿಕೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತೀಯತೆ ಮತ್ತು ಅಸ್ಪೃಶ್ಯತೆಗೆ ಗಣೇಶೋತ್ಸವದಲ್ಲಿ ಯಾವುದೇ ಅವಕಾಶ ಇರಬಾರದು. ‘ನಾವೆಲ್ಲ ಹಿಂದೂ, ನಾವೆಲ್ಲ ಒಂದು’ ಎಂಬ ಭಾವನೆ ಸಮಾಜದಲ್ಲಿ ಬಲಗೊಳ್ಳಬೇಕು ಎಂದು ಹೇಳಿದರು. ಜಾತೀಯತೆ ಮತ್ತು ಅಸ್ಪೃಶ್ಯತೆ ಹಿಂದೂ ಸಮಾಜವನ್ನು ದುರ್ಬಲಗೊಳಿಸಿವೆ. ಈ ದುರ್ಬಲತೆಯನ್ನು ನಿವಾರಿಸಿ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ನಡೆಯಬೇಕು ಎಂದರು.ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದ ಉದ್ದೇಶ ಸಾಮಾಜಿಕ ಜಾಗೃತಿ ಮೂಡಿಸುವುದಾಗಿತ್ತು. ಮತಾಂತರ, ಅಸ್ಪೃಶ್ಯತೆ ಹಾಗೂ ಜಾತೀಯತೆ ವಿರುದ್ಧ ಜಾಗೃತಿ ಮೂಡಿಸುವುದು ಮತ್ತು ಸಮಾಜವನ್ನು ಸಂಘಟಿಸುವುದು ಗಣೇಶೋತ್ಸವದ ಆಶಯವಾಗಬೇಕು ಎಂದು ಪ್ರ...
ಪಣತೂರಿನಲ್ಲಿ 45 ಎಕರೆ ವಿಸ್ತೀರ್ಣದ ವೃಕ್ಷೋದ್ಯಾನ ಲೋಕಾರ್ಪಣೆ: ರಾಜಧಾನಿಯಲ್ಲಿ ಮತ್ತಷ್ಟು ಬೃಹತ್ ಉದ್ಯಾನವನ; ರಾಮಲಿಂಗಾರೆಡ್ಡಿ

ಪಣತೂರಿನಲ್ಲಿ 45 ಎಕರೆ ವಿಸ್ತೀರ್ಣದ ವೃಕ್ಷೋದ್ಯಾನ ಲೋಕಾರ್ಪಣೆ: ರಾಜಧಾನಿಯಲ್ಲಿ ಮತ್ತಷ್ಟು ಬೃಹತ್ ಉದ್ಯಾನವನ; ರಾಮಲಿಂಗಾರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ನಗರದ ಪೂರ್ವ ತಾಲೂಕಿನ ವರ್ತೂರು ಹೋಬಳಿಯ ಪಣತೂರು ಗ್ರಾಮದಲ್ಲಿ ಅರಣ್ಯ ಇಲಾಖೆಯ ನಗರವನ ಯೋಜನೆಯಡಿ 45 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ಧಿಪಡಿಸಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಪಣತೂರು ಗ್ರಾಮದಲ್ಲಿ ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುವ ಒಟ್ಟು 145 ಎಕರೆ ಪ್ರದೇಶದಲ್ಲಿ 45 ಎಕರೆ ಜಾಗವನ್ನು ಕ್ವಾಲ್ಕಾಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಿಎಸ್‌ಆರ್ ನಿಧಿ ಹಾಗೂ ‘ಸೇಟ್ರೀಸ್’ ಎನ್‌ಜಿಒ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿವಿಧ ಜಾತಿಯ ಮರಗಿಡಗಳು, ಪ್ರಾಣಿ ಹಾಗೂ ಪಕ್ಷಿ ಸಂಕುಲದಿಂದ ಕೂಡಿರುವ ಈ ಪ್ರದೇಶವನ್ನು ಸಾರ್ವಜನಿಕರಿಗೆ ಹಸಿರು ವಾತಾವರಣ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿದೆ.ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಉಳಿದಿರುವ 100 ಎಕರೆ ಪ್ರದೇಶವನ್ನೂ ಕ್ವಾಲ್ಕಾಮ್ ಸಂಸ್ಥೆ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು. ಅಗತ್ಯವಿರುವಲ್ಲಿ ಅರಣ್ಯ ಇಲಾಖೆಯಿಂದಲೂ ಅನುದಾನ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ₹4.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ವೃಕ್ಷೋದ್ಯಾನವನ್ನು ಸುಮಾರು ₹4.50 ಕೋಟಿ ಸಿಎಸ್‌ಆರ್ ಅ...
UPI ಶುಲ್ಕ: ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ; ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ ಬೇಸರ 

UPI ಶುಲ್ಕ: ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ; ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ ಬೇಸರ 

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಸರ್ಕಾರದ ನಿಲುವು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಹಿನ್ನಡೆಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದ್ದಾರೆ. ಮಾಧ್ಯಮ ಹೇಳಿಕೆ ನೀಡಿರುವ ಅವರು, ಆರಂಭದಲ್ಲಿ ಉಚಿತ ಹಾಗೂ ಸರಳ ಡಿಜಿಟಲ್ ವಹಿವಾಟಿನ ವ್ಯವಸ್ಥೆಯನ್ನು ಉತ್ತೇಜಿಸಿ ಜನರನ್ನು ಡಿಜಿಟಲ್ ವಹಿವಾಟಿನತ್ತ ಸೆಳೆದ ಬಳಿಕ, ಇದೀಗ ಶುಲ್ಕ ವಿಧಿಸಲು ಮುಂದಾಗಿರುವುದು ಸರ್ಕಾರದ ಅಸಂಬದ್ಧ ನೀತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಯುಪಿಐ ಶುಲ್ಕವನ್ನು ಗ್ರಾಹಕರ ಬದಲಿಗೆ ವ್ಯಾಪಾರಿಗಳ ಮೇಲೆ (MDR) ವಿಧಿಸಲಾಗುತ್ತದೆ ಎಂಬ ವಾದ ಸರಿಯಲ್ಲ. ಅಂತಿಮವಾಗಿ ವ್ಯಾಪಾರಿಗಳು ಈ ಹೆಚ್ಚುವರಿ ವೆಚ್ಚವನ್ನು ದಿನಸಿ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಗ್ರಾಹಕರ ಮೇಲೆಯೇ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.₹1 ಲಕ್ಷದವರೆಗಿನ ವಿನಾಯಿತಿ ಸೇರಿದಂತೆ ಜಿಎಸ್‌ಟಿ ಲೆಕ್ಕಾಚಾರಗಳಲ್ಲಿನ ಗೊಂದಲಗಳು ಸಣ್ಣ ವ್ಯಾಪಾರಿಗಳಲ್ಲಿ ಅನಿಶ್ಚಿತತೆ ಮೂಡಿಸಬಹುದು. ಇದರಿಂದ ಕೆಲವರು ಡಿಜಿಟಲ್ ಪಾವತಿಗೆ ಬದಲಾಗಿ ನಗದ...
ಕಾವೇರಿ ನೀರಾವರಿ ನಿಗಮ ಸಭೆ: ಮೇಕೆದಾಟು ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧೋಕಾರಿಗಳಿಗೆ ಸೂಚನೆ

ಕಾವೇರಿ ನೀರಾವರಿ ನಿಗಮ ಸಭೆ: ಮೇಕೆದಾಟು ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧೋಕಾರಿಗಳಿಗೆ ಸೂಚನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿರುವ ನೀರಾವರಿ ಯೋಜನೆಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಎಸಿ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು ಫೀಲ್ಡ್‌ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮದ ಸಭಾಂಗಣದಲ್ಲಿ ಕಾವೇರಿ ನೀರಾವರಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಡ್ಯಾಂಗಳ ನಿರ್ವಹಣೆಗೆ ಆದ್ಯತೆ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ, ಡೆಡ್ ಸ್ಟೋರೇಜ್, ತಮಿಳುನಾಡಿಗೆ ಹರಿಸಿದ ನೀರು, ಬಿಳಿಗುಂಡ್ಲುವಿನಲ್ಲಿ ದಾಖಲಾಗಿರುವ ಪ್ರಮಾಣ ಹಾಗೂ ಅಚ್ಚುಕಟ್ಟು ಪ್ರದೇಶದ ಪರಿಸ್ಥಿತಿಯ ಸಂಪೂರ್ಣ ಮಾಹಿತಿಯನ್ನು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಗಮದ ವ್ಯಾಪ್ತಿಯ 23 ಸಣ್ಣ ಅ...
ಮಂಗಳೂರು ಜೈಲು ಜಾಮರ್ ವಿವಾದ: ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ತೆರೆ, ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ

ಮಂಗಳೂರು ಜೈಲು ಜಾಮರ್ ವಿವಾದ: ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ತೆರೆ, ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿವಾದವನ್ನು ರಾಜಕೀಯ ಆರೋಪ-ಪ್ರತ್ಯಾರೋಪದ ಬದಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆಯ ಮೂಲಕ ಪರಿಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗದ ಅಧ್ಯಕ್ಷ, ವಕೀಲ ಮನೋರಾಜ್ ರಾಜೀವ ಪ್ರತಿಪಾದಿಸಿದ್ದಾರೆ . ಜೈಲು ಜಾಮಾರ್ ವ್ಯವಸ್ಥೆಯಿಂದ ಸಾರ್ವಜನಿಕರು ಪರದಾಡುವಂಟಾಗಿದ್ದಾರೆ, ಆ ವಿಚಾರವನ್ನು ಮುಂದಿಟ್ಟು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಕಾನೂನು ತಜ್ಞರೂ ಆದ ಮನೋರಾಜ್ ರಾಜೀವ್ ಬೇಸರ ವ್ಯಕ್ತಪಡಿಸಿದ್ಧತೆ. ಈ ಕುರಿತಂತೆ ಅವರು ಮಂಗಳೂರಿನಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿ ಗಮನಸೆಳೆಯಿತು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಾಗೃಹದ ಭದ್ರತೆ ಹಾಗೂ ಕಾರಾಗೃಹದೊಳಗೆ ಅನಧಿಕೃತ ಮೊಬೈಲ್ ಫೋನ್ ಬಳಕೆಯನ್ನು ತಡೆಯುವುದು ಅತ್ಯಗತ್ಯ. ಆದರೆ ಕಾರಾಗೃಹದ ಹೊರಭಾಗದಲ್ಲಿರುವ ನ್ಯಾಯಾಲಯಗಳು, ವಕೀಲರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಕಾನೂನುಬದ್ಧ ...
ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ

ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ

ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಮಗಳೂರು: ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಲೋಪದೋಷಗಳು ಹಾಗೂ ಕಳಪೆ ಕಾಮಗಾರಿಗಳು ನಡೆಯುತ್ತಿವೆ ಎಂಬ ದೂರುಗಳು ಕೇಳಿಬರುತ್ತಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಸೆ.12ರಂದು ಬರೆದಿರುವ ಪತ್ರದಲ್ಲಿ ಯೋಜನೆಯ ಅನುಷ್ಠಾನದಲ್ಲಿನ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಿರುವ ಅವರು, ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿರುವ ಯೋಜನೆಯ ಪ್ರಯೋಜನ ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ 1,01,30,702 ಗ್ರಾಮೀಣ ಕುಟುಂಬಗಳಿದ್ದು, ಯೋಜನೆ ಆರಂಭಕ್ಕೂ ಮುನ್ನ 24,28,517 ಮನೆಗಳಿಗೆ ನಳ ಸಂಪರ್ಕವಿತ್ತು. ಯೋಜನೆಯಡಿ ಇದುವರೆಗೆ 63,74,100 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಒಟ್ಟು 88,02,617 ಗ್ರಾಮೀಣ ಮನೆಗಳಿಗೆ ನಳ ಸಂಪರ್ಕ ಒದಗಿಸಲಾಗಿದೆ. ಇದಕ್ಕಾಗಿ ಸುಮಾರು ₹37,901.37 ಕೋಟಿ ವೆಚ್ಚವಾಗಿದೆ ಎಂದು ಅವರು...
ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ

ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಆದರೆ, ಕೆಲವೆಡೆ ರೈತರು ನೀರು ತಡೆಯುತ್ತಿರುವುದು ಗಮನಕ್ಕೆ ಬಂದಿದೆ. ಕೆ.ಆರ್. ಪೇಟೆ ಹಾಗೂ ಪಾಂಡವಪುರ ಭಾಗದ ರೈತರು ಸಹಕರಿಸಿ, ಮದ್ದೂರು ಮತ್ತು ಮಳವಳ್ಳಿ ಭಾಗದ ಕೆರೆಗಳು ತುಂಬಲು ಅವಕಾಶ ಮಾಡಿಕೊಡಬೇಕು ಎಂದು ಸಚಿವರು ಮನವಿ ಮಾಡಿದರು.ನೀರು ಹರಿಸುವ ಕಾರ್ಯಕ್ಕೆ ಅಡ್ಡಿಪಡಿಸಿದರೆ ಅಗತ್ಯವಿದ್ದಲ್ಲಿ ಪೊಲೀಸ್ ಭದ್ರತೆ ಪಡೆದು ನೀರು ಹರಿಸಲಾಗುವುದು ಎಂದು ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದೆ ಕರ್ನಾಟಕದ ವಾಸ್ತವ ನೀರಿನ ಸ್ಥಿತಿಗತಿಗಳನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು. ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ ಎಂಬ ತಮ್ಮ ನಿಲುವನ್ನು ಪುನರುಚ್ಚರಿಸಿದ ಅವರು, ಯೋಜನೆ ಅನುಷ್ಠಾನಕ್ಕೆ ಅಗತ...
ಮಲೆನಾಡಲ್ಲಿ ಪ್ರತ್ಯೇಕ ದುರಂತ: ನಾಲ್ವರು ಸಾವು

ಮಲೆನಾಡಲ್ಲಿ ಪ್ರತ್ಯೇಕ ದುರಂತ: ನಾಲ್ವರು ಸಾವು

ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಮಗಳೂರು/ಶಿವಮೊಗ್ಗ: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಮೂರು ಪ್ರತ್ಯೇಕ ದುರ್ಘಟನೆಗಳಲ್ಲಿ ಇಬ್ಬರು ಬೈಕ್ ಸವಾರರು, ಪಾದಚಾರಿ ಹಾಗೂ ವಿದ್ಯಾರ್ಥಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಸಖರಾಯಪಟ್ಟಣ ಸಮೀಪದ ಹಳೇಹಟ್ಟಿ ಬಳಿ ಬೈಕ್ ಸವಾರರ ಮೇಲೆ ಸರ್ಕಾರಿ ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ಟೈಲ್ಸ್ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಕಲ್ಲು ಹಾಗೂ ನೆಹಾನ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಮುಂದೆ ಸಾಗುತ್ತಿದ್ದ ಮತ್ತೊಂದು ಬೈಕ್ ಏಕಾಏಕಿ ಬಲಕ್ಕೆ ತಿರುವು ಪಡೆದಿದೆ ಎನ್ನಲಾಗಿದೆ. ಇದರಿಂದ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಇದೇ ವೇಳೆ ಬಂದ ಸರ್ಕಾರಿ ಬಸ್ ಅವರ ಮೇಲೆ ಹರಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಪ್ರಕರಣ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಿವಮೊಗ್ಗ ಸಮೀಪ ಸವಳಂಗ ರಸ್ತೆಯ ಕೃಷಿ ಕಾಲೇಜು ಸಮೀಪ ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಆನಂದ್ ಮೃತಪಟ್ಟಿದ್ದಾರೆ. ಗಂಗೂರು ನಿವಾಸಿಯಾಗಿದ್ದ ಅವರು ‘ತುಂಗತರಂಗ’ ದಿನಪತ್ರಿಕೆ ಸಿಬ್ಬಂದಿಗಳಾದ ರಾಕೇಶ್ ಹಾಗೂ ರವಿ ಅವರ ತಂದೆ ಎಂದು ತಿಳಿದುಬಂದಿದೆ. ರಸ್ತೆ ದಾಟುತ್ತಿದ್ದ ವೇಳೆ ...
ಚಾಮರಾಜನಗರ: ಗುಂಡ್ಲುಪೇಟೆ ಬಳಿ ಕಾಡಾನೆ ದಾಳಿಗೆ ರೈತ ಬಲಿ

ಚಾಮರಾಜನಗರ: ಗುಂಡ್ಲುಪೇಟೆ ಬಳಿ ಕಾಡಾನೆ ದಾಳಿಗೆ ರೈತ ಬಲಿ

ಪ್ರಮುಖ ಸುದ್ದಿ, ರಾಜ್ಯ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಮಾನವ–ಕಾಡುಪ್ರಾಣಿ ಸಂಘರ್ಷ ಮತ್ತೆ ತೀವ್ರಗೊಂಡಿದ್ದು, ಕಾಡಾನೆ ದಾಳಿಗೆ 65 ವರ್ಷದ ರೈತ ಜನ್ನೂರ ನಾಯಕ ಮೃತಪಟ್ಟಿದ್ದಾರೆ. ಕೋಟೆಕೆರೆ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ರೈತನನ್ನು ತುಳಿದು ಕೊಂದು ಹಾಕಿದೆ. ಘಟನೆ ಬಳಿಕ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಡಾನೆಗಳ ನಿರಂತರ ಉಪಟಳದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ದೂರಿದ್ದಾರೆ.ಕಾಡಾನೆಗಳು ಕಾಡಿನಿಂದ ನಾಡಿನತ್ತ ಬರುವುದನ್ನು ತಡೆಯಲು ಸೋಲಾರ್ ಫೆನ್ಸಿಂಗ್ ಹಾಗೂ ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಹಲವು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ....
‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕನ್ನಡ ಚಿತ್ರರಂಗದ ‘ಕನಸಿನ ರಾಣಿ’ ಮಾಲಾಶ್ರೀ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ರುಕ್ಮಿಣಿ ವಸಂತ್ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರಕ್ಕೆ ‘ಮಂಗಳಗೌರಿ’ ಎಂಬ ಶೀರ್ಷಿಕೆ ಇಡಲಾಗಿದೆ. ಗೌರಿ–ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಬಿಡುಗಡೆ ಮಾಡಿದೆ. ಪೋಸ್ಟರ್‌ನಲ್ಲಿ ರುಕ್ಮಿಣಿ ವಸಂತ್ ಪೊಲೀಸ್ ಅಧಿಕಾರಿಯ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿಸಿದೆ.ಬಿಗ್ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಹೇಮಂತ್ ಎಂ. ರಾವ್ ಅವರ ದಾಕ್ಷಾಯಣಿ ಟಾಕೀಸ್ ಜಂಟಿಯಾಗಿ ನಿರ್ಮಿಸುತ್ತಿವೆ. ರಾಹುಲ್ ಪಿ.ಕೆ ನಿರ್ದೇಶಕರಾಗಿ ಕೈಜೋಡಿಸಿದ್ದಾರೆ. ಮಾಲಾಶ್ರೀ ಅವರ ಅನುಭವ ಹಾಗೂ ರುಕ್ಮಿಣಿ ವಸಂತ್ ಅವರ ಹೊಸ ತಲೆಮಾರಿನ ಜನಪ್ರಿಯತೆಯ ಸಂಗಮವಾಗಿರುವ ‘ಮಂಗಳಗೌರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದ್ದಂತೆಯೇ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ....