Tuesday, August 4

ರಾಜ್ಯ

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ.ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈ...
ಮಂಕಿ ಫಾಕ್ಸ್ ಆತಂಕ : ವಿಮಾನ ನಿಲ್ದಾಣ, ಬಂದರಿನಲ್ಲಿ ಕಡೆ ಬಿಗಿಕ್ರಮ

ಮಂಕಿ ಫಾಕ್ಸ್ ಆತಂಕ : ವಿಮಾನ ನಿಲ್ದಾಣ, ಬಂದರಿನಲ್ಲಿ ಕಡೆ ಬಿಗಿಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:  ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡ...
ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಜಭವನ ನಡುವಿನ ಸಂಘರ್ಷ ತೀವ್ತಗೊಂಡಂತೆ ಭಾಸವಾಗುತ್ತಿದೆ.ಆಗಸ್ಟ್‌ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ ಎನ್ನಲಾಗಿದೆ.ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್‌ ಆಂಡ್‌ ಕಂಟ್ರೀ ಪ್ಲಾನಿಂಗ್‌ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ...
‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿಯ ಟ್ವೀಟ್‌ಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡೊರುವ ರಾಮಲಿಂಗಾರೆಡ್ಡಿ, 'ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತ. ಆದರೂ ನಮ್ಮ‌ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ' ಎಂದಿದ್ದಾರೆ.ಕರ್ನಾಟಕ ಸರ್ಕಾರವು 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಅರಿವು ಕೂಡ ಇವರಿಗೆ ಇಲ್ಲವಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಸಾರಿಗೆ ಸಂಸ್ಥೆಗಳ‌ ಅಭಿವೃದ್ಧಿಯ ಎರಡು ...
ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದರು‌ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂ...
‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು.ಪ್ರವರ್ಗ 'ಎ' ಮತ್ತು 'ಬಿ' ಅಧಿಸೂಚಿತ ದೇವಾಲಯಗಳಲ್ಲಿ 'ಮಾಂಗಲ್ಯ ಭಾಗ್ಯ' ಯೋಜನೆ ಅಡಿ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲಾಯಿತು. ಈ ಕಾರ್ಯಕ್ರಮ ಮುಜರಾಯಿ ಸಚಿವರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕ ಎಂ.ಆರ್. ಮಂಜುನಾಥ್, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಆಧಿಕಾರಿಗಳು ಉಪಸ್ಥಿತರಿದ್ದರು.  ದೇಶಿಕೇಂದ್ರ ಮಹಾಸ್ವಾಮಿ, ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಆಶೀರ್ವಚನವನ್ನು ನೀಡಿದರು.ಈ ಯೋಜನೆಯಡಿಯಲ್ಲಿ ವಧು-ವರರಿಗೆ ರೂ.55,000/-ಗಳ ಪ್ರೋತ್ಸಾಹ ಧನವನ್ನು ಆದಾಯ ಕಡಿಮೆ ಇರುವ ದೇವಾಲಯಗಳ ನಿಧಿಯಿಂದ ಬಳಸಿಕೊಳ್ಳಲಾಗುವುದು. ಆದಾಯ ಕಡಿಮೆ ಇರುವ ದೇವಾಲಯಗಳಲ್ಲಿ ರೂ.55,000/-ಗಳ ಪ್ರೋತ್ಸಾಹ ಧನವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ನೀಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು....
‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷ ಏರ್ಪಟ್ಟಿದೆ.ಒಂದೆಡೆ ಈ ಪ್ರಾಸಿಕ್ಯೂಷನ್ ಅನಿಮತಿಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ. ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಪ್ರತಿಕ್ರಿಯಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್...
“ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ”; ಗೌರ್ನರ್ ಬಗ್ಗೆ ರಾಮಲಿಂಗಾ ರೆಡ್ಡಿ ಗರಂ

“ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ”; ಗೌರ್ನರ್ ಬಗ್ಗೆ ರಾಮಲಿಂಗಾ ರೆಡ್ಡಿ ಗರಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಆಧಾರರಹಿತ ಆರೋಪಗಳನ್ನು ಮುಂದಿಟ್ಟು ನೀಡಲಾದ ಮನವಿ ಬಗ್ಗೆ ವಿವಾದಾತ್ಮಕ ನಿರ್ಧಾರ ಪ್ರಕಟಿಸಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. "ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ" ಎಂದು ಅವರು ಗೌರ್ನರ್ ವಿರುದ್ದ ಗುಡುಗಿದ್ದಾರೆ.ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ರಾಮಲಿಂಗಾ ರೆಡ್ಡಿ, ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು ಕಾರಣ ನೀಡಿ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಿದರು.ಬಿಜೆಪಿ ಎಂದರೆ, ಬುರುಡೆ ಜನರ ಪಕ್ಷ. ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ...
ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಯಚೂರು: ಸಚಿವ ಸಂಪುಟದ ನಿರ್ಣಯದ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯುಷನ್‌)ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ತಕ್ಷಣವೇ ಕೇಂದ್ರ ಸರ್ಕಾರ ವಾಪಸ್‌‍ ಕರೆಸಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ, ಕೌಶಲ್ಯಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ಒತ್ತಾಯಿಸಿದ್ದಾರೆ.ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಸಚಿವ ಸಂಪುಟದ ತೀರ್ಮಾನವನ್ನು ರಾಜ್ಯಪಾಲರು ಒಪ್ಪಿಕೊಳ್ಳಬೇಕು. ಆದರೆ ಸಂಪುಟದ ತೀರ್ಮಾನವನ್ನು ತಿರಸ್ಕರಿಸಿ ಅನುಮತಿ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು.ರಾಜ್ಯಪಾಲರು ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ಸರ್ಕಾರ 60 ಪುಟಗಳ ಸಮರ್ಪಕ ಉತ್ತರ ನೀಡಿದೆ. ಇದನ್ನು ಪರಿಶೀಲಿಸ...
‘ಬಾಂಗ್ಲಾ ಮಾದರಿ.. ನಡೆ’? ವಿವಾದದ ಸುಳಿಯಲ್ಲಿ ಐವಾನ್ ಡಿಸೋಜಾ; ಕೈ ಶಾಸಕನ ವಿರುದ್ದ ಕ್ರಮಕ್ಕೆ ಬಿಜೆಪಿ ಆಗ್ರಹ

‘ಬಾಂಗ್ಲಾ ಮಾದರಿ.. ನಡೆ’? ವಿವಾದದ ಸುಳಿಯಲ್ಲಿ ಐವಾನ್ ಡಿಸೋಜಾ; ಕೈ ಶಾಸಕನ ವಿರುದ್ದ ಕ್ರಮಕ್ಕೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗುತ್ತಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಇದೀಗ ತಮ್ಮ ಲೂಸ್ ಟಾಕ್‌ನಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.‌ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರನ್ನು ಬಾಂಗ್ಲಾದೇಶ ಮಾದರಿಯಲ್ಲಿ ಕಾಂಗ್ರೆಸ್ ಶಾಸಕರೂ ಆದ ಐವಾನ್ ಡಿಸೋಜಾ ಹೇಳಿದ್ದಾರೆಂದು ಬಿಜೆಪಿ ನಾಯಕ ಸಿ.ಟಿ.ರವಿ ಆರೋಪಿಸಿದ್ದಾರೆ. ಐವಾನ್ ಡಿಸೋಜಾ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಸಿ.ಟಿ.ರವಿ ಆಗ್ರಹಿಸಿದ್ದಾರೆ.ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ‌ ಐವಾನ್‌ ಡಿಸೋಜ ಬಿಚ್ಚಿಟ್ಟಿದ್ದಾರೆ ಎಂದು ಸಿ.ಟಿ‌.ರವಿ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು?ರಾಜಭವನಕ್ಕೆ ಕಾಂಗ್ರೆಸ್‌ ಪುಢಾರಿಗಳನ್ನು ನುಗ್ಗಿಸುತ್ತೀರಾ? ಎಂದು ಪ್ರಶ್ನಿಸಿರುವ ರವಿ, ಕಾಂಗ್ರೆಸ್‌ ಶಾಸಕರ ಈ ...