Friday, January 30

ರಾಜ್ಯ

‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’; ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’; ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದೇಶದ ಬೆನ್ನೆಲುಬು ರೈತ, 'ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ' ಎಂಬ ಇತಿಹಾಸ ಮರುಕಳಿಸಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ ಪಡಿಸಿ ನಿರ್ಧಾರ ಕೈಗೊಂಡಿದೆ. ಹೋರಾಟನಿರತ ರೈತ ಬಂಧುಗಳು ನಿರ್ಧಾರವನ್ನು ಸ್ವಾಗತಿಸಿ ಮುಷ್ಕರವನ್ನು ಕೈ ಬಿಟ್ಟಿರುವುದು ಸಮಂಜಸವಾಗಿದೆ ಎಂದು ಅವರು ಹೇಳಿದ್ದಾರೆ. ಈ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ, ರೈತನಾಯಕ ಯಡಿಯೂರಪ್ಪ ಅವರ ಪುತ್ರನಾಗಿ ಭಾಗವಹಿಸಿ ರೈತ ಹೋರಾಟಕ್ಕೆ ದನಿಗೂಡಿಸಿದ ಸಂದರ್ಭ ನನ್ನಲ್...
ಮೈಸೂರು ನಗರ ಸಾರಿಗೆಯಲ್ಲಿ ನ ಧ್ವನಿ ಸ್ಪಂದನ ಯೋಜನೆಗೆ ಕೆಎಸ್‌ಆರ್‌ಟಿಸಿ ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025

ಮೈಸೂರು ನಗರ ಸಾರಿಗೆಯಲ್ಲಿ ನ ಧ್ವನಿ ಸ್ಪಂದನ ಯೋಜನೆಗೆ ಕೆಎಸ್‌ಆರ್‌ಟಿಸಿ ಗೆ ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ 2025

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮೈಸೂರು ನಗರ ಸಾರಿಗೆಯಲ್ಲಿ ಜಾರಿಗೆ ತಂದ ‘ಧ್ವನಿ ಸ್ಪಂದನ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಎಂಬ ನೂತನ ಯೋಜನೆ ದೇಶದ ಮೊದಲ ಮಾದರಿ ಯೋಜನೆಯಾಗಿ ಗುರುತಿಸಿಕೊಂಡಿದ್ದು, ‘ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ–2025’ ಅನ್ನು ಪಡೆದುಕೊಂಡಿದೆ. ಈ ಪ್ರಶಸ್ತಿಯನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ (NIC) ಉಪ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಮಿತ್ತಲ್ ಹಾಗೂ ಸ್ವಯಂ ಸಂಸ್ಥೆಯ ಸ್ಥಾಪಕ ಸೈಮು ಜಿಂದಾಲ್ ಅವರು ಕೆಎಸ್‌ಆರ್‌ಟಿಸಿಯ ಮಂಡ್ಯ ವಿಭಾಗದ ನಿಯಂತ್ರಣಾಧಿಕಾರಿ ಶರಣ್ ಬಸವರಾಜ ಕೆ.ಎಂ. ಮತ್ತು ಉಪ ಮುಖ್ಯ ಗಣಕ ವ್ಯವಸ್ಥಾಪಕಿ ಸುಧಾರಾಣಿ ಆರ್. ಅವರಿಗೆ ಪ್ರದಾನ ಮಾಡಿದರು. ‘ಸ್ವಯಂ’ ಸಂಸ್ಥೆಯು ಅಂತರರಹಿತ ವಿನ್ಯಾಸ ಹಾಗೂ ಒಳಗೊಳ್ಳುವಿಕೆಯ ಕ್ಷೇತ್ರದಲ್ಲಿ ಮಾದರಿಯಾಗಿರುವ ಸಂಸ್ಥೆಗಳನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡುತ್ತದೆ. 2025ನೇ ವರ್ಷ ಸಂಸ್ಥೆಯ 25ನೇ ವಾರ್ಷಿಕೋತ್ಸವವಾಗಿದ್ದು, ಜಾಗತಿಕ ಮಟ್ಟದಲ್ಲಿ 25 ವರ್ಷಗಳ ಸೇವೆಯನ್ನು ಆಚರಿಸುತ್ತಿದೆ. ಮೈಸೂರು ನ...
“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

“ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿ ಕೊಡುಗೆ ಏನು, ?” – ಕುಮಾರಸ್ವಾಮಿ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯ ಮೂಲಕ ಮಂಡ್ಯ ಸಂಸದ ಚಲುವರಾಯಸ್ವಾಮಿ ಬಗ್ಗೆ ಕಿಡಿಕಾರಿದ್ದಾರೆ. “ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು, ಚಲುವರಾಯಸ್ವಾಮಿ?” ಎಂದು ಪ್ರಶ್ನಿಸಿದ ಅವರು, ಸ್ಥಳೀಯ ಅಭಿವೃದ್ಧಿ, ಕೈಗಾರಿಕಾ ಯೋಜನೆಗಳು ಮತ್ತು ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ದೃಶ್ಯಮಟ್ಟದ ಬದಲಾವಣೆ ಕಾಣಿಸದಿರುವುದನ್ನು ಟೀಕಿಸಿದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವಾಗ ಮಂಡ್ಯ ಜಿಲ್ಲೆಯ ಪ್ರಗತಿಗೆ ಎಷ್ಟು ಯೋಜನೆಗಳನ್ನು ತಂದಿದ್ದೀರಿ ಎಂಬುದನ್ನು ಸಾರ್ವಜನಿಕವಾಗಿ ಹೇಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಚಲುವರಾಯಸ್ವಾಮಿ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು pic.twitter.com/w2FSULOnlv— Janata Dal Secular (...

ಕಬ್ಬು ಮತ್ತು ಸಕ್ಕರೆ ವಿಷಯದಲ್ಲಿ ಕೇಂದ್ರ ಸರ್ಕಾರವೇ FRP ನಿಗದಿಪಡಿಸುತ್ತದೆ; ಮುಖ್ಯಮಂತ್ರಿ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ಸೀಮಿತವಾಗಿದೆ. ಈ ಸಂಬಂಧಿತ ದರ ನಿಗದಿ ಹಾಗೂ ನಿಯಂತ್ರಣ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವಶದಲ್ಲಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು 2025ರ ಮೇ 6ರಂದು ಎಫ್.ಆರ್.ಪಿ (Fair and Remunerative Price) — ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು ನಿಗದಿಪಡಿಸಿರುವುದಾಗಿ ತಿಳಿಸಿದರು. “ಕೇಂದ್ರ ಸರ್ಕಾರವೇ ದರ ನಿಗದಿಪಡಿಸುತ್ತದೆ. ರಾಜ್ಯ ಸರ್ಕಾರದ ಕೆಲಸ ರೈತರಿಗೆ ನಿಗದಿತ ತೂಕ, ಬೆಲೆ ಹಾಗೂ ಸಮಯಕ್ಕೆ ಪಾವತಿ ಖಚಿತಪಡಿಸುವುದಾಗಿದೆ. ಇದು ಕಬ್ಬು ನಿಯಂತ್ರಣ ಕಾಯ್ದೆಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ,” ಎಂದರು. ಮುಖ್ಯಮಂತ್ರಿ ಅವರು ಮುಂದುವರಿದು, ಸಕ್ಕರೆ ಮೇಲಿನ ನಿಯಂತ್ರಣವೂ ‘ಅಗತ್ಯ ವಸ್ತುಗಳ ಕಾಯ್ದೆ’ ಪ್ರಕಾರ ಕೇಂದ್ರ ಸರ್ಕಾರದ ವಶದಲ್ಲಿದೆ ಎಂದು ಹೇಳಿದರು. “ಯುಪಿಎ ಸರ್ಕಾರದ ಅವಧಿಯಿಂದ 2017–18 ರವರೆಗೆ ರಿಕವರಿ ಶೇ.9.5 ರಷ್ಟಿತ...
ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಹರಿಯಾಣದಲ್ಲಿ ಮತಗಳ್ಳತನ; ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ನಡೆದ 25 ಲಕ್ಷಕ್ಕೂ ಹೆಚ್ಚು ಮತಗಳ್ಳತನದ ಘಟನೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೇಲೆ ನಡೆದ ಅತ್ಯಂತ ದೊಡ್ಡ ದಾಳಿ ಎಂದು ರಾಜ್ಯ ಯುವ ಕಾಂಗ್ರೆಸ್ ಖಂಡಿಸಿದೆ. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಿರ್ಲಕ್ಷ್ಯ ಮತ್ತು ಜನರ ಮತಹಕ್ಕಿನ ಅಪಹರಣದ ವಿರುದ್ಧವಾಗಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಇಂದು ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಮಂಜುನಾಥ ಗೌಡರು ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಯಿತು. ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡೆಯನ್ನು ಖಂಡಿಸಿದ ನಾಯಕರು ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದರು. ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿಯು ಎಲ್ಲಾ ಜಿಲ್ಲಾ ಮತ್ತು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ಕಮಿಟಿ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು....
ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ವಿಧಿವಶರಾಗಿದ್ದಾರೆ. ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಹರೀಶ್ ರಾಯ್ ಹಲವು ದಶಕಗಳಿಂದ ಸಿನಿಮಾ ಲೋಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. 55 ವರ್ಷ ವಯಸ್ಸಿನ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ ಆರತಿ ಹಾಗೂ ಮಗ ರೋಷನ್ ಸಹಿತ ಅನೇಕ ಬಂಧುಗಳನ್ನು ಅವರು ಆಗಲಿದ್ದಾರೆ. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ....
ಮೇಕೆದಾಟು ಯೋಜನೆ; ಕಾಲಹಾರಣ ಮಾಡಬಾರದು, ವಕೀಲರಿಗೆ ಡಿಕೆಶಿ ಸಲಹೆ

ಮೇಕೆದಾಟು ಯೋಜನೆ; ಕಾಲಹಾರಣ ಮಾಡಬಾರದು, ವಕೀಲರಿಗೆ ಡಿಕೆಶಿ ಸಲಹೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ; ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ಅಲ್ಲಿ ಬಾಕಿಯಿರುವ ಕರ್ನಾಟಕದ ಜಲ ವಿವಾದಗಳ ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ ಮೋಹನ್ ವಿ ಕಾತರಾಕಿ, ನಿಶಾಂತ್ ಪಾಟೀಲ್, ರಾಜ್ಯದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನನ್ನ ತಾಂತ್ರಿಕ ಸಲಹೆಗಾರರಾದ ಜೈಪ್ರಕಾಶ್ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ಈಗಾಗಲೇ ರೈತರಿಗೆ ಭೂ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ. ಹೊಸ ಕಾಯ್ದೆ ಪ್ರಕಾರ ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕಿದೆ. ಬೇರೆ ರಾಜ್ಯಗಳಲ್ಲಿ ಈ ಪ್ರಾಧಿಕಾರ ರಚನೆ ಆಗಿವೆ. ಬಿಹಾರದಲ್ಲಿ ಪ್ರಾಧಿಕಾರದ ಮೂಲಕ ಸಾವಿರಾರು ಪ್ರಕರಣ ಬಗೆಹರಿಸಲಾಗಿದೆ. ಕಾನೂನು ಉಪಯೋಗಿಸಿಕೊಳ್ಳಬೇಕು. ಮಹದಾಯಿ ಯೋಜನೆ ಸಂಬಂಧ ಕೆಲವು ದಾಖಲೆ ಸಿದ್ಧಪಡಿಸಲು ಅವರು ಸೂಚಿಸಿದರು. ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಸಚಿವರ ಪತ್ರ ನಮ್ಮ ಬಳಿ ಇದೆ. ಈ ಯೋಜನೆ ಅಂದಾಜು ವೆಚ್ಚ 9 ಸಾವಿರ ಕೋಟಿ ಇತ್ತು. ಈಗ 13-14 ಸಾವಿರ ಕೋಟಿಗೆ ಏರಿಕೆಯಾಗಿದೆ...
KMF ಗೂ ಗ್ಯಾರೆಂಟಿ ಹೊಡೆತ? ನಂದಿನಿ ತುಪ್ಪ ದುಬಾರಿ

KMF ಗೂ ಗ್ಯಾರೆಂಟಿ ಹೊಡೆತ? ನಂದಿನಿ ತುಪ್ಪ ದುಬಾರಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ. "ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು @INCKarnatakaಸರ್ಕಾರ ತುಪ್ಪ ತಿನ್ನುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ.ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ… pic.twitter.com/2Di1Koit0X— Janata Dal Secular (@JanataDal_S) November 5, 2025 'ಸಾಲ ಮಾಡಿಯಾದರೂ ತುಪ್ಪ ತಿನ್ನು' ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ' ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತ...
ನ.8, 9ರಂದು ಬೆಂಗಳೂರಿನಲ್ಲಿ RSS ಸರಸಂಘಚಾಲಕ್ ಮೋಹನ್ ಭಾಗವತ್ ವಿಶೇಷ ಉಪನ್ಯಾಸಮಾಲೆ

ನ.8, 9ರಂದು ಬೆಂಗಳೂರಿನಲ್ಲಿ RSS ಸರಸಂಘಚಾಲಕ್ ಮೋಹನ್ ಭಾಗವತ್ ವಿಶೇಷ ಉಪನ್ಯಾಸಮಾಲೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ ನೂರು ವರ್ಷವನ್ನು ಪೂರ್ಣಗೊಳಿಸಿ ರಾಷ್ಟ್ರದ ಸರ್ವಾಂಗೀಣ ಉನ್ನತಿಯ ಧ್ಯೇಯದೊಂದಿಗೆ ಮುನ್ನಡೆದಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದು ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಆಯೋಜಿಸಲಾಗಿದೆ. ಸಮಾಜದ ಗಣ್ಯಮಾನ್ಯರು, ನೀತಿ ನಿರೂಪಕರು ಹಾಗೂ ಸಮಾಜಸೇವಕರೊಂದಿಗಿನ ಸಂವಾದವನ್ನು ಸಂಘವು ನೂರನೇ ವರ್ಷದಲ್ಲೂ ಮುಂದುವರಿಸಿದ್ದು, ಬೆಂಗಳೂರಿನಲ್ಲಿ ಇದೇ ನವೆಂಬರ್ 8 ಹಾಗೂ 9 ರಂದು ಸರಸಂಘಚಾಲಕರಾದ ಡಾ|| ಮೋಹನ್ ಭಾಗವತ್ ಅವರು ವಿಶೇಷ ಉಪನ್ಯಾಸಮಾಲೆಯಲ್ಲಿ ಮಾತನಾಡಲಿದ್ದಾರೆ. ಶತಾಬ್ದಿ ವರ್ಷದಲ್ಲಿ ದೇಶದ 4 ಕಡೆಗಳಲ್ಲಿ (ನವದೆಹಲಿ, ಬೆಂಗಳೂರು, ಮುಂಬಯಿ ಮತ್ತು ಕೊಲ್ಕತ್ತಾ) ಡಾ|| ಮೋಹನ್ ಭಾಗವತ್ ಅವರು ಈ ಉಪನ್ಯಾಸಮಾಲೆಗಳನ್ನು ನಡೆಸಿಕೊಡಲಿದ್ದಾರೆ. ನವದೆಹಲಿಯಲ್ಲಿ ಕಳೆದ ಆಗಸ್ಟ್ 26, 27, 28 ರಂದು ನವದೆಹಲಿಯಲ್ಲಿ ಮೊದಲ ಕಾರ್ಯಕ್ರಮ ಸುಸಂಪನ್ನಗೊಂಡಿದೆ. ಈ ಉಪನ್ಯಾ...