
ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ
ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು.ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಭೆ ನಡೆಸಿದ ಸಚಿವರು, ವೈದ್ಯಕೀಯ ಸಂಸ್ಥೆಗಳಲ್ಲಿ ಭದ್ರತೆ ಹೆಚ್ಚಿಸುವ ಬಗ್ಗೆ ಸಮಾಲೋಚಿಸಿದರು.ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಮೂಲಕ ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದ ಸಚಿವ ಪಾಟೀಲ್, "ಮಹಿಳಾ ವೈದ್ಯರ ಸುರಕ್ಷತೆಗೆ ನಾವು ಬದ್ಧ. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಆಧಾರದ ಮೇಲೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸಲಾಗುವುದು," ಎಂದರು.ಸಭೆಯ ನಂತರ ಮಾತನಾಡಿದ ಡಾ. ಶರಣ ಪ್ರಕಾಶ ಪಾಟೀಲ್ , "ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲ...








