
ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್
ಬೆಂಗಳೂರು: ಸಿದ್ದರಾಮಯ್ಯ ಅವರು ಮೂಡಾ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಸನ್ನಿಹಿತ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷದಲ್ಲೀಗ ಸಿಎಂ ಸ್ಥಾನಕ್ಕಾಗಿ ನಾಯಕರ ಮ್ಯೂಸಿಕ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ...





