Friday, January 30

ರಾಜ್ಯ

ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖ ಮತ್ತೊಮ್ಮೆ ಬಹಿರಂಗ: ರಾಹುಲ್ ಗಾಂಧಿ

ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖ ಮತ್ತೊಮ್ಮೆ ಬಹಿರಂಗ: ರಾಹುಲ್ ಗಾಂಧಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಹಿಂದೆ ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು. ಇದೀಗ ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅ...
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ (55) ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ರಾಜ್ಯ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಸೋಮವಾರ ಬೆಳಗ್ಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ ಅವರನ್ನು ತಕ್ಷಣ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು....
ಫೆ.28ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ–1 , ಏ.25ರಿಂದ ಮೇ 9ರವರೆಗೆ ಪರೀಕ್ಷೆ–2

ಫೆ.28ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ–1 , ಏ.25ರಿಂದ ಮೇ 9ರವರೆಗೆ ಪರೀಕ್ಷೆ–2

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2025–26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–1 ಮತ್ತು ಪರೀಕ್ಷೆ–2ರ ಅಂತಿಮ ವೇಳಾಪಟ್ಟಿಯನ್ನು ಪ್ರೀ-ಯೂನಿವರ್ಸಿಟಿ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ. ಅದರಂತೆ ಪರೀಕ್ಷೆ–1 ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ, ಹಾಗೂ ಪರೀಕ್ಷೆ–2 ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ. ಪರೀಕ್ಷೆ–1 ವೇಳಾಪಟ್ಟಿ ಫೆ. 28: ಕನ್ನಡ, ಅರೇಬಿಕ್ ಮಾ. 2: ಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ ಮಾ. 3: ಇಂಗ್ಲಿಷ್ ಮಾ. 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾ. 5: ಇತಿಹಾಸ, ಗೃಹ ವಿಜ್ಞಾನ ಮಾ. 6: ಭೌತಶಾಸ್ತ್ರ ಮಾ. 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂವಿಜ್ಞಾನ ಮಾ. 9: ರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ ಮಾ.10: ಅರ್ಥಶಾಸ್ತ್ರ ಮಾ.11: ತರ್ಕಶಾಸ್ತ್ರ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ ಮಾ.12: ಹಿಂದಿ ಮಾ.13: ರಾಜ್ಯಶಾಸ್ತ್ರ ಮಾ.14: ಲೆಕ್ಕಪತ್ರ ನಿರ್ವಹಣೆ ಮಾ.16: ಸಮಾಜಶಾಸ್ತ್ರ, ಗಣಿತ ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ...
ಕಚೇರಿ ಅವಧಿ ಮುಗಿದ ನಂತರ ಮೇಲ್ಮನವಿ ವಿಚಾರಣೆ; RTI ಕಾರ್ಯಕರ್ತರನ್ನು ಹೀನಾಯವಾಗಿ ನಡೆದುಕೊಂಡ ಅಧೀಕ್ಷಕ ಇಂಜಿನೀಯರ್

ಕಚೇರಿ ಅವಧಿ ಮುಗಿದ ನಂತರ ಮೇಲ್ಮನವಿ ವಿಚಾರಣೆ; RTI ಕಾರ್ಯಕರ್ತರನ್ನು ಹೀನಾಯವಾಗಿ ನಡೆದುಕೊಂಡ ಅಧೀಕ್ಷಕ ಇಂಜಿನೀಯರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ ನಡೆಸಿ ಭ್ರಷ್ಟಾಚಾರ ಮುಕ್ತ ಅಧಿಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಹಾಗೂ ಹಿಂದಿನ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆಯವರು ಇದೀಗ ತಮ್ಮ ಇಲಾಖೆಯ ಅಧಿಕಾರಿಯ ಕರ್ತವ್ಯಲೋಪ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದೇ ಕುತೂಹಲದ ವಿಷಯ. ಈ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ದೌಲತ್ತು, ಕರ್ತವ್ಯಲೋಪಗಳು ಸಾರ್ವಜನಿಕರಿಗೆ ಸವಾಲಾಗಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದಿರುವ ಈ ಪ್ರಕರಣ ಸಾಕ್ಷಿಯಾಗಿದೆ. ಬೆಂಗಳೂರಿನ ಆಲ್ವಿನ್ ಎಂ ಎಂಬವರು ಸಲ್ಲಿಸಿದ್ದ ಮಾಹಿತಿ ಹಕ್ಕು ಮೇಲ್ಮನವಿಯೊಂದರ ವಿಚಾರಣೆ ವೇಳೆ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವೃತ್ತದ ಅಧೀಕ್ಷಕ ಅಭಿಯಂತರ ಇಂದ್ರಕುಮಾರ್ ಅವರು ಮೇಲ್ಮನವಿ ಪ್ರತಿನಿಧಿ ಜೊತೆ ಹೀನಾಯವಾ...
ಸಂಪುಟ ಪುನಾರಚನೆ ವೇಳೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಸಂಪುಟ ಪುನಾರಚನೆ ವೇಳೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೋಲಾರ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿ, “ಸಂಪುಟ ಪುನಾರಚನೆ ವೇಳೆ ನೋಡೋಣ,” ಎಂದು ಹೇಳಿದರು. ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು ಇದ್ದು, ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದರು. ಇದೇ ವೇಳೆ ಮಾತನಾಡಿದ ಅವರು, ಯತ್ತಿನಹೊಳೆ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು....
ವಿದೇಶಿ ಮಾರುಕಟ್ಟೆಯಲ್ಲೂ ಪ್ರದರ್ಶನವಾಗಲಿದೆ ನಾಡಿನ ಉತ್ಪನ್ನಗಳು

ವಿದೇಶಿ ಮಾರುಕಟ್ಟೆಯಲ್ಲೂ ಪ್ರದರ್ಶನವಾಗಲಿದೆ ನಾಡಿನ ಉತ್ಪನ್ನಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ "ವಾಲ್‌ಮಾರ್ಟ್‌" ಜೊತೆ ಒಪ್ಪಂದ ಮಾಡಿಕೊಂಡಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ "ವಾಲ್‌ಮಾರ್ಟ್‌ ವೃದ್ಧಿ" ಒಪ್ಪಂದಕ್ಕೆ ಸಹಿ ಹಾಕಿದರು. ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು. ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ "ಐಡಿಯಾಸ್ ಟು ಇಂಪ್ಯಾಕ್ಟ್" ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ...
ಬೀದರ್: ಭೀಕರ ಅಪಘಾತ: ತೆಲಂಗಾಣ ಮೂಲದ ಮೂವರು ಸಾವು

ಬೀದರ್: ಭೀಕರ ಅಪಘಾತ: ತೆಲಂಗಾಣ ಮೂಲದ ಮೂವರು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೀದರ್: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಘಟನೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಾಜಪ್ಪ, ನವೀನ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರಲ್ಲಿ ನಾಗರಾಜ್ ನಾರಾಯಣ ಖೇಡ್‌ನ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ. ಮೃತರು ತೆಲಂಗಾಣ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಧನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಧನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
‘ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ’; ಅಶೋಕ್

‘ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ’; ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ. ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು. ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು...
‘ಸುರಂಗ ವಿವಾದ’: ಬಿಜೆಪಿ ನಾಯಕರಿಂದ ಸುಳ್ಳು ಆರೋಪ ಎಂದ ಕಾಂಗ್ರೆಸ್

‘ಸುರಂಗ ವಿವಾದ’: ಬಿಜೆಪಿ ನಾಯಕರಿಂದ ಸುಳ್ಳು ಆರೋಪ ಎಂದ ಕಾಂಗ್ರೆಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು ನಗರದ ಅಭಿವೃದ್ಧಿ ವಿರೋಧಿಗಳು ಹಾಗೂ ಸುರಂಗ ಮಾರ್ಗದ ಬಗ್ಗೆ ಸುಳ್ಳಿನ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಪಕ್ಷದ ನಾಯಕರ ಆಧಾರ ರಹಿತ ಹೇಳಿಕೆ ವಿರುದ್ಧ ಪತ್ರಿಕಾಗೋಷ್ಠಿಯ ಮೂಲಕ ಬಿಜೆಪಿಯ ಭ್ರಷ್ಟಾಚಾರಿಗಳ ಅವೈಜ್ಞಾನಿಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ಎಂ. ಲಕ್ಷ್ಮಣ್, ಕೆಪಿಸಿಸಿ ನಾಯಕರಾದ ಎಸ್.ಮನೋಹರ್, ಸುಧಾಕರ್, ಆನಂದ್, ಪುಟ್ಟರಾಜು, ಕುಶಾಲ್ ಹರುವೇಗೌಡ, ನವೀನ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರುನಗರ ಅಭಿವೃದ್ದಿ ಕೆಲಸಗಳಿಗೆ ವಿರೋಧಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿಸೂರ್ಯ ನಡೆಯನ್ನು ಖಂಡಿಸಿದರು. ಎಂ.ಲಕ್ಷ್ಮಣ್ ರವರು ಮಾತನಾಡಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಟನಲ್ ಮಾಡುವುದಕ್ಕೆ ಖಾಸಗಿ ಸಹಬಾಗಿತ್ವದಲ್ಲಿ ಕಾಮಗಾರಿ ನಡೆಯುತ್ತದೆ ಇದರಲ್ಲಿ ಏನು ಸಿಗುವುದಿಲ್ಲ ಎಂದು ಅಶೋಕ್, ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ ಎಂದು ಟೀಕಿಸಿದರು...
ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎ ಖಾತಾ, ಬಿ ಖಾತಾ ವಿಚಾರವಾಗಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ ಎಂದರು. ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು. ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು....