Friday, January 30

ರಾಜ್ಯ

ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎ ಖಾತಾ, ಬಿ ಖಾತಾ ವಿಚಾರವಾಗಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ ಎಂದರು. ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು. ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು....
ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ

ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು. ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇತಿಹಾ...
ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2025...
‘ಗ್ರೇಟರ್ ಮೈಸೂರು’; ಅಧಿಕಾರಿಗಳೊಂದಿಗೆ ಸಿಎಂ ಕಾರ್ಯತಂತ್ರ

‘ಗ್ರೇಟರ್ ಮೈಸೂರು’; ಅಧಿಕಾರಿಗಳೊಂದಿಗೆ ಸಿಎಂ ಕಾರ್ಯತಂತ್ರ

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ ಎಂದ ಸಿಎಂ, ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ‌ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂ...
ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ

ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಅತಾರ್ಕಿಕ, ಅಮಾನವೀಯ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿಕಾರಿಗಳ ಕ್ರಮವು ಹಿಂದೂ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ. ಮೂಗುತಿ ಹಾಗೂ ಕಿವಿಯೋಲೆ ಬಿಚ್ಚಿಸಿವುದರಿಂದ ನಕಲು ತಡೆಯಬಹುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿದಿದ್ದರೆ, ಅದು ಮೂರ್ಖತನದ ಪರಮಾವಾಧಿಯಷ್ಟೇ ಎಂದವರು ಹೇಳಿದ್ದಾರೆ. ತಂತ್ರಜ್ಞಾನ, ಸಿ.ಸಿ. ಕ್ಯಾಮೆರಾ ಗಳನ್ನೂ ಉಪಯೋಗಿಸಿ ಪರೀಕ್ಷೆಯಲ್ಲಿ ನಕಲು, ಅಕ್ರಮ ಆಗದಂತೆ ನೋಡಿಕೊಳ್ಳಬೇಕೇ ಹೊರತು ಈ ರೀತಿಯಾದ ಅವೈಜ್ಞಾನಿಕ ಕ್ರಮಗಳಿಂದ ಸಾಧ್ಯವಿಲ್ಲ. ಅಷ್ಟಕ್ಕೂ, ಕಿವಿಯೋಲೆ ಹಾಗೂ ಮೂಗುತಿಯಲ್ಲಿ ಏನನ್ನು ಅಡಗಿಸಿಕೊಳ್ಳಬಹುದು ಎಂಬುದನ್ನು ಪ್ರಾಧಿಕಾರ ಸ್ಪಷ್ಟೀಕರಿಸಬೇಕು ಎಂದಿದ್ದಾರೆ. ಈ ರೀತಿಯಾದ ಅವೈಜ್ಞಾನಿಕ, ಅತಾರ್ಕಿಕ ನಿರ್ಧಾರಗಳನ್ನು ಪರೀಕ್ಷಾ ಪ್ರಾಧಿಕಾರ ಕೈಗೊಂಡರೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಯತ್ನಾಳ್ ನೀಡಿದ್ದಾರೆ. ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹ...
ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ  ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC ಐವನ್ ಡಿಸೋಜಾ

ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC ಐವನ್ ಡಿಸೋಜಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು. ಯು.ಟಿ.ಖಾದರ್ ರವರು ವಿಧಾನಸಭಾ ಸಚಿವಾಲಯದ ಮು...
ರಾಮಲಿಂಗ ರೆಡ್ಡಿ ಮುಂದಿನ ಸಿಎಂ? ಈ ಬಗ್ಗೆ ಅವರೇ ಹೇಳಿದ ಕಥೆ ಹೀಗಿದೆ

ರಾಮಲಿಂಗ ರೆಡ್ಡಿ ಮುಂದಿನ ಸಿಎಂ? ಈ ಬಗ್ಗೆ ಅವರೇ ಹೇಳಿದ ಕಥೆ ಹೀಗಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರ'ಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ' ಎಂದು ಸಾರಿಗೆ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ 'RamalingaReddyForCM' ಎಂದು ಪೋಸ್ಟ್'ಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ, 'ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ' ಎಂದು ತಿಳಿಸಿದ್ದಾರೆ. 'ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು' ಎಂದವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಲು ಎಲ್ಲಾ ರೀತಿಯಿಂದಲೂ ತಾವು ಅರ್ಹರಿದ್ದೀರಿ, ನಿಮ್ಮ ಸ್ಥಾನಮಾನದ ವಿಚಾರವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ತಪ್ಪೇನಿಲ್ಲ.— Umesh Gowda (@Umeshgowda6975) November 2, 2025 'ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ ಕಾರ್ಯಗಳನ್ನು ಮಾಡುತ...
ಬೆಂಗಳೂರು–ಎರ್ನಾಕುಲಂ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ; ವೇಳಾಪಟ್ಟಿ ಹೀಗಿದೆ

ಬೆಂಗಳೂರು–ಎರ್ನಾಕುಲಂ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ; ವೇಳಾಪಟ್ಟಿ ಹೀಗಿದೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈಲ್ವೆ ಸಚಿವಾಲಯದ ಅಧಿಸೂಚನೆ ಪ್ರಕಾರ, ರೈಲು ಸಂಖ್ಯೆ 26651 ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು, ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ನಂತರ ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಟು, ರಾತ್ರಿ 11:00ಕ್ಕೆ ಬೆಂಗಳೂರಿಗೆ ತಲುಪಲಿದೆ. . ಈ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ನಗರಗಳ ನಡುವಿನ ಸಂಚಾರ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ....
‘ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ’; ಸಿದ್ದರಾಮಯ್ಯ

‘ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ’; ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ನೆನಪಿಸಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಹೇಳಿದರು. . ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ.ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ...
ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಖ್ಯಾತ ರೌಡಿ ತುಕ್ಕ ನೌಫಲ್ ಎಂಬಾತ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೇರಳ ರಾಜ್ಯದ ಕಾಸರಗೋಡು ಉಪ್ಪಳ ಬಳಿ ಹಂತಕರು ಕುಖ್ಯಾತ ರೌಡಿ ತುಕ್ಕ ನೌಫಲ್'ನನ್ನ ಕೊಲೆ ಮಾಡಿದ್ದಾರೆ. ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಕರಾವಳಿ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿದ್ದಾನೆ. ಕೊಲೆ, ಸುಲಿಗೆ, ದರೋಡೆ ಸಹಿತ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತ ಪೊಲೀಸರ ಎಚ್ಚರಿಕೆಗೂ ಜಗ್ಗಲಿಲ್ಲ. ಮಂಗಳೂರು ಪೊಲೀಸರ ಹೇಳಿಕೆ ಪ್ರಕಾರ ಈತ ಕ್ಲಾಸ್ ಒನ್ ರೌಡಿ ಎಂದು ಬಿಂಬಿತನಾಗಿದ್ದ. ಮಂಗಳೂರಿನ ಫೈಝಲ್ ನಗರ ನಿವಾಸಿ ನೌಫಲ್ ಕೊಲೆಯಾಗಿರುವ ಬಗ್ಗೆ ಪಡೆದ ಮಂಗಳೂರು ನಗರ ಪೊಲೀಸರ ತಂಡ ಕಾಸರಗೋಡಿಗೆ ತೆರಳಿ ಕಲೆಹಾಕಿದೆ....