ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ
ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು 5 ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು. ಇಲಾ...







