Tuesday, January 27

ರಾಜ್ಯ

ಕೇರಳ ಲಾಭಿಗೆ ಮಣಿಯಿತೇ ಸಿದ್ದು ಸರ್ಕಾರ? ಕೋಗಿಲು ಮಾದರಿಯಲ್ಲೇ ಕವಿಕಾ..

ಕೇರಳ ಲಾಭಿಗೆ ಮಣಿಯಿತೇ ಸಿದ್ದು ಸರ್ಕಾರ? ಕೋಗಿಲು ಮಾದರಿಯಲ್ಲೇ ಕವಿಕಾ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡಿಗರ ಹೆಮ್ಮೆಯ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು (ಕವಿಕಾ) ಕಡೆಗಣಿಸಿ, 174.73 ಕೋಟಿ ರೂ. ಮೊತ್ತದ ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ರಾಜ್ಯ ಸರ್ಕಾರ, ಕೇರಳ ಮೂಲಕದ ಕಂಪನಿಗೆ ರತ್ನಗಂಬಳಿ ಹಾಸಿದೆ ಎಂದು ಪ್ರತಿಪಕ್ಷ ಜೆಡಿಎಸ್ ಆರೋಪಿಸಿದೆ. ಕಳೆದ 8 ದಶಕಗಳಿಂದಲೂ ಗುಣಮಟ್ಟದ ಟ್ರಾನ್ಸ್‌ಫಾರ್ಮಾರ್‌ಗಳ ತಯಾರಿಕೆಯಲ್ಲಿ ದೇಶದಲ್ಲೇ ಪ್ರಖ್ಯಾತಿ ಪಡೆದಿರುವ ರಾಜ್ಯದ ಕವಿಕಾವನ್ನು ಬದಿಗೊತ್ತಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಕೇರಳ ಎಲೆಕ್ನಿಕಲ್ ಅಂಡ್ ಅಲೈಡ್ ಇಂಜನಿಯರಿಂಗ್ ಲಿಮಿಟೆಡ್‌ನಿಂದಲೇ 11,721 ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದಕ್ಕಾಗಿ 4 ಜಿ ವಿನಾಯಿತಿಯನ್ನೂ ನೀಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಕೇರಳದ ವಲಸಿಗರಿಗೆ ವಸತಿ ಕಲ್ಪಿಸುವಂತೆ, ಕೇರಳದ ಸಿಎಂ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯ ಪ್ರವೇಶಿಸಿ, ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈಗ ಮತ್ತೊಮ್ಮೆ ಕೇರಳ ಲಾಬಿ...
ರಾಜ್ಯದಲ್ಲಿ ಕಾಂಗ್ರೆಸ್ ವಕೀಲರ ಸಮಾವೇಶ; ಜ-24 ರಂದು ಎಐಸಿಸಿ ನಾಯಕರು ಮಂಗಳೂರಿಗೆ

ರಾಜ್ಯದಲ್ಲಿ ಕಾಂಗ್ರೆಸ್ ವಕೀಲರ ಸಮಾವೇಶ; ಜ-24 ರಂದು ಎಐಸಿಸಿ ನಾಯಕರು ಮಂಗಳೂರಿಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ ಇಡೀ ದಿನ ಸರಣಿ ಸಭೆಗಳನ್ನು ನಡೆಸಿದರು. ದೇಶದ ಎಲ್ಲೆಡೆ ಕಾನೂನು ಘಟಕಗಳನ್...
KGF ಪೊಲೀಸ್ ನಿರ್ಲಕ್ಷ್ಯ ಬಗ್ಗೆ ಅಸಮಾಧಾನ; CSI ಬಿಷಪ್ ಪ್ರಕರಣ ಬಗ್ಗೆ ಸಿಐಡಿ ತನಿಖೆ ಸಾಧ್ಯತೆ

KGF ಪೊಲೀಸ್ ನಿರ್ಲಕ್ಷ್ಯ ಬಗ್ಗೆ ಅಸಮಾಧಾನ; CSI ಬಿಷಪ್ ಪ್ರಕರಣ ಬಗ್ಗೆ ಸಿಐಡಿ ತನಿಖೆ ಸಾಧ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಕ್ಷಿಣ ಭಾರತದ ಪ್ರಭಾವಿ ಕ್ರೈಸ್ತ ಸಮುದಾಯವಾಗಿರುವ CSI-KCD ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. CSI ಬಿಷಪ್ ವಿರುದ್ದದ KGF ಬಿಷಪ್ ಕಾಟನ್ ಸ್ಕೂಲ್ ಗೋಲ್ಮಾಲ್ ಪ್ರಕರಣ ಬಗ್ಗೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಸಮುದಾಯದ ಪ್ರಮುಖರು ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗೆ ದೂರೊಂದು ಸಲ್ಲಿಕೆಯಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ಅನುಕೂಲವಾಗುತ್ತಿದೆ ಎಂದಿರುವ ಒಂದು ಗುಂಪು ಇದೀಗ ಸಿಐಡಿ ತನಿಖೆಗೆ ಒತ್ತಾಯಿಸಿದೆ. CSI ಸದಸ್ಯ ಜೋಸೆಫ್ ಶಾಂತರಾಜ್ ಎಂಬವರು ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಗೆ ಬುಧವಾರ  ದೂರು ಸಲ್ಲಿಸಿ, ದ್ದು, ತನಿಖೆಯನ್ನು ಸಿಐಡಿಗೆ ವಹಿಸಬೇಕೆಂದು ಕೋರಿದ್ದಾರೆ. KGFನಲ್ಲಿ ಬಿಷಪ್ ಕಾಟನ್ ಶಾಲೆ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಪ್ರಾಧಿಕಾರ (KUDA) ದಲ್ಲಿ ಕಾನೂನು ಬಾಹಿರವಾಗಿ ಖಾತಾ ಮತ್ತು ಇತರ ಅನುಮತಿ ಪಡೆಯಲು ಸರ್ಕಾರಿ ಕಂದಾಯ ಭೂಮಿ ನಕಲಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿ ಸಂತ ಜಾನ್ಸ್ ಚರ್ಚ್'ನ ಸಬ್ಸೆಪ್ಷನ್ ಸದಸ್ಯ ಜೋಸೆಫ್ ಶಾಂತರಾಜ್ ಎಂಬವರು 2023ರಲ್ಲೇ ದೂರ...
ಸರ್ಕಾರಿ ಶಾಲೆಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ: ಸರ್ಕಾರದ ಮಹತ್ವದ ಆದೇಶ

ಸರ್ಕಾರಿ ಶಾಲೆಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ: ಸರ್ಕಾರದ ಮಹತ್ವದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಮತ್ತು ಮುಂಬಡ್ತಿ ಸಂಬಂಧಿಸಿದ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ 1978ರಿಂದ 2003ರವರೆಗೆ ರಾಜ್ಯದ ನಾಲ್ಕು ವಿಭಾಗೀಯ ಕಚೇರಿಗಳ ಸಹ ನಿರ್ದೇಶಕರಿಗೆ ಹಾಗೂ 2003ರಿಂದ ಬಳಿಕ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಮುಂಬಡ್ತಿ ವಿವರಗಳನ್ನು ಆಯೋಗಕ್ಕೆ ಸಲ್ಲಿಸುವಂತೆ ಸರ್ಕಾರ ಈ ಹಿಂದೆ ಸೂಚನೆ ನೀಡಿತ್ತು. ಆದರೆ ಶಿರಸಿ, ಉಡುಪಿ, ರಾಮನಗರ ಮತ್ತು ಬೀದರ್ ಶೈಕ್ಷಣಿಕ ಜಿಲ್ಲೆಗಳು ಮಾತ್ರ ಇದುವರೆಗೆ ಮಾಹಿತಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಉಳಿದ ಶೈಕ್ಷಣಿಕ ಜಿಲ್ಲೆಗಳು ಹಾಗೂ ನಾಲ್ಕು ವಿಭಾಗೀಯ ಕಚೇರಿಗಳಿಂದ ಇನ್ನೂ ಯಾವುದೇ ಮಾಹಿತಿ ಸಲ್ಲಿಕೆಯಾಗಿಲ್ಲ. ಈ ಕುರಿತಾಗಿ ಸುಮಾರು 10 ತಿಂಗಳು ಕಳೆದರೂ ಸ್ಪಂದನೆ ದೊರೆತಿಲ್ಲ ಎಂದು ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಕ್ಕೆ ವರದಿ ಸಲ್ಲಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ...
ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸೌಲಭ್ಯವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ ಗ್ರಾಅಪ 30 ಗ್ರಾಪಂಸಿ 2008, ದಿನಾಂಕ 31-10-2008ರ ಪ್ರಕಾರ, ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು 01-11-2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಆದರೆ ಈ ಆದೇಶದ ಅನುಷ್ಠಾನವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾನವಾಗಿ ನಡೆದಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನಗೊಂಡಿರುವುದು ಕಂಡುಬಂದಿದೆ. ಇನ್ನು ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಈ ಸೌಲಭ್ಯವನ್ನು ಇನ್ನೂ ಜಾರಿಗೊಳಿಸಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲ...

ಪರೀಕ್ಷಾ ಗೋಲ್ ಮಾಲ್ ಆರೋಪ; ಖರ್ಗೆ ಒಡೆತನದ ಕಾಲೇಜು ಮೇಲೆ FIR ಗೆ ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಪರೀಕ್ಷಾ ಗೋಲ್ ಮಾಲ್ ನಡೆದಿದ್ದು,ಕೂಡಲೇ ಪ್ರಕರಣ ದಾಖಲಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಸಿದ್ದಾರ್ಥ ವಿಹಾರ ಟ್ರಸ್ಟ್ ಹೆಸರಲ್ಲಿ ಲೂಟಿ ಹೊಡೆದಿದ್ದಾಯ್ತು ಈಗ ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಪಿಎಸ್ಐ ಹಗರಣದ ಬಗ್ಗೆ ಸುಳ್ಳು ಹೇಳುವ ಪ್ರಿಯಾಂಕ್ ಖರ್ಗೆ, ತಮ್ಮದೇ ಸಂಸ್ಥೆಯಲ್ಲಿ ನಡೆದಿರುವ ಈ ಮಹಾ ಪರೀಕ್ಷಾ ಅಕ್ರಮಕ್ಕೆ ಏನು ಹೇಳುತ್ತಾರೆ? ಕಾನೂನು ಕಾಲೇಜಿನಲ್ಲೇ ಕಾನೂನು ಬಾಹಿರ ಕೆಲಸ ನಡೆಸುತ್ತಿದ್ದಾರೆ? ಇನ್ನೂ ಇಂತಹ ಅದೆಷ್ಟು ಅಕ್ರಮಗಳು ನಡೆದಿವೆ? ಎಂದು ಬಿಜೆಪಿ ತನ್ನ X ಖಾಜತೆಯಲ್ಲಿ ಪ್ರಶ್ನಿಸಿದೆ. ಕೂಡಲೇ ಸರ್ಕಾರ ಸಂಸ್ಥೆಯ ಅಧ್ಯಕ್ಷರು ಹಾಗೂ ಸಂಬಂಧ ಪಟ್ಟವರ ಮೇಲೆ FIR ಹಾಕಿ ಬಂಧಿಸಿ ವಿಚಾರಣೆ ನಡೆಸಬೇಕು, ನ್ಯಾಯಯುತವಾಗಿ ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಕೂಡದು ಎಂದು ಒತ್ತಾಯಿಸಿದೆ. ಸಿದ್ದಾರ್ಥ ವಿಹಾರ ಟ್ರಸ್ಟ್ ಹೆಸರಲ್ಲಿ ಲೂಟಿ ಹೊಡೆದಿದ್ದಾಯ್ತು ಈಗ @kharge ಒಡೆತನದ ಸಿದ...
ದೇವರಾಜ ಅರಸುಗಿಂತಲೂ ಹೆಚ್ಚಿನ ಅವಧಿಗೆ ಸಿಎಂ; ಅವಕಾಶ ನೀಡಿದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ

ದೇವರಾಜ ಅರಸುಗಿಂತಲೂ ಹೆಚ್ಚಿನ ಅವಧಿಗೆ ಸಿಎಂ; ಅವಕಾಶ ನೀಡಿದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಡಿ.ದೇವರಾಜ ಅರಸು ಅವರಿಗಿಂತಲೂ ಹೆಚ್ಚಿನ ಅವಧಿಗೆ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಜ್ಯದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. 'ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ' ಎಂದಿದ್ದಾರೆ. 'ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ' ಎಂದವರು ತಿಳಿಸಿದ್ದಾರೆ. 'ಸಾಮಾಜಿಕ ನ್ಯಾಯದ ಬಂಡಿಯ ಪ...
KIA ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿಗೆ ಸಂಸದ ಸುಧಾಕರ್‌ ಸೂಚನೆ

KIA ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿಗೆ ಸಂಸದ ಸುಧಾಕರ್‌ ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್...

ಕೆಎಸ್‌ಆರ್‌ಟಿಸಿ ಪ್ರತಿಷ್ಠಿತ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡಾ 5 ರಿಂದ 15ರವರೆಗೆ ರಿಯಾಯಿತಿ ಘೋಷಿಸಿದೆ. ಈ ರಿಯಾಯಿತಿ ಜನವರಿ 5, 2026ರಿಂದ ಜಾರಿಗೆ ಬರಲಿದೆ. ಬೆಂಗಳೂರು–ಮಂಗಳೂರು, ಬೆಂಗಳೂರು–ಕುಂದಾಪುರ, ಉಡುಪಿ, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಪುತ್ತೂರು, ಮಡಿಕೇರಿ/ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ/ಸಾಗರ ಸೇರಿದಂತೆ ಚೆನ್ನೈ, ಹೈದರಾಬಾದ್/ಸಿಕಂದರಾಬಾದ್, ತಿರುಪತಿ, ಮಂತ್ರಾಲಯ, ಪುಣೆ/ಮುಂಬೈ, ವಿಜಯವಾಡ, ಎರ್ನಾಕುಲಂ, ಮದುರೈ, ಕೋಯಿಮತ್ತೂರು, ತಿರುಶೂರು ಸೇರಿದಂತೆ ಆಯ್ದ ಮಾರ್ಗಗಳಲ್ಲಿ ಈ ರಿಯಾಯಿತಿ ಅನ್ವಯವಾಗಲಿದೆ. ರಾಜಹಂಸ, ನಾನ್‌ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್ ಹಾಗೂ ಮಲ್ಟಿ ಆಕ್ಸಲ್ ಎಸಿ ಸ್ಲೀಪರ್ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ನಿಗಮ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ನಿಗಮ ಮನವಿ ಮಾಡಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳು...
ಬೆಂಗಳೂರಿನ ವಿಎಸ್ ಗಾರ್ಡನ್​ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

ಬೆಂಗಳೂರಿನ ವಿಎಸ್ ಗಾರ್ಡನ್​ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ನಡೆದ ಸುದ್ದಿ ಹರಿದಾಡಿ, ಜೆಜೆ ನಗರ ಉದ್ವಿಗ್ನಗೊಂಡಿದೆ. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಕೈಂಕರ್ಯದಲ್ಲಿ ನಿರತರಾಗಿದ್ದಾಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಓಂ ಶಕ್ತಿ ಮಾಲಾಧಾರಿ ಯುವತಿಯರ ತಲೆಗೆ ಕಲ್ಲೇಟು ತಗುಲಿ ಗಾಯಗಳಾಗಿವೆ. ಕೂಡಲೇ ಅವರನ್ನು ದಾಖಲಿಸಲಾಗಿದೆ ಎನ್ನಲಾಗಿದೆ. ಕಲ್ಲು ತೂರಾಟದ ಘಟನೆಯಿಂದ ಕೆರಳಿದ ಮಾಲಾಧಾರಿಗಳು ಜೆಜೆ ನಗರ ಪೊಲೀಸ್ ಸ್ಟೇಷನ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹರಸಾಹಸಪಟ್ಟ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ....