Wednesday, August 5

ರಾಜ್ಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ನೀರು ಬಿಡುವಂತೆ ಸೂಚಿಸಲಾಗಿದ್ದರೂ, ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹ ತೀರಾ ಕಡಿಮೆಯಿದೆ. ಈ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಚರ್ಚಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮುಂಗಾರು ಹಂಗಾಮಿನಲ್ಲಿ ಕಾವೇರಿ ಕಣಿವೆಯ ಜಲಾಶಯಗಳ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಶೇಕಡಾ 42.8 ರಷ್ಟು ಮಳೆ ಅಭಾವ ದಾಖಲಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಹರಿದು ಬಂದ ಒಟ್ಟು ಒಳಹರಿವು ಕೇವಲ 4.1 TMC ಮಾತ್ರವಾಗಿದ್ದು, ಇದು ಕಳೆದ ಅರ್ಧ ...
ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ಈ ಆದೇಶ ಹೊರಬಿದ್ದಿದ್ದು, ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಕಾವೇರಿ ನಿರ್ವಹಣಾ ಪ್ರಾಧಿಕಾರದ ನಿಯಮಗಳಿಗೆ ಬದ್ಧರಾಗಿರುವುದಾಗಿ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ಸಿಡಬ್ಲ್ಯುಆರ್‌ಸಿ ತೀರ್ಮಾನವನ್ನು "ವಿಚಿತ್ರ ನಿರ್ಧಾರ" ಎಂದು ಟೀಕಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಿಲ್ಲದಿರುವುದು ಹಾಗೂ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಕೊರತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಸಮಂಜಸವಲ್ಲ ಎಂದು ಅವರು ಹೇಳಿದ್ದಾರೆ. ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯದ ಪರವಾಗಿ ಸಮರ್ಪಕ ಅಂಕಿ-ಅಂಶಗಳೊಂದಿಗೆ ಸರ್ಕಾರ ವಾದ ಮಂಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು....
ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿ, ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅನುದಾನಕ್ಕಾಗಿ ಬಾಕಿ ಇರುವ ರಾಜ್ಯದ 13 ಪ್ರಮುಖ ಯೋಜನೆಗಳು ಹಾಗೂ ವಿಧೇಯಕಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ 15ನೇ ಹಣಕಾಸು ಆಯೋಗದಡಿ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗಬೇಕಿರುವ ₹2,186.20 ಕೋಟಿ ಅನುದಾನ, ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ (STRR) ಯೋಜನೆಯ ₹9,613 ಕೋಟಿ ಮೌಲ್ಯದ ಬಾಕಿ ಕಾಮಗಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ, ಬೆಂಗಳೂರು ಉಪನಗರ ರೈಲು ಯೋಜನೆಗೆ 153 ರೈಲ್ವೆ ಕೋಚ್‌ಗಳ ಖರೀದಿ ಅನುಮೋದನೆ, ಹಾಗೂ ಕೋಲಾರ ರೈಲ್ವೆ ಕೋಚ್ ಕಾರ್ಖಾನೆ ಯೋಜನೆ ಜಾರಿಗೊಳಿಸುವ ಕುರಿತು ಒತ್ತಾಯಿಸಲಾಯಿತು. ಇದೇ ವೇಳೆ ಹೆಚ್‌ಎಎಲ್ ವಿಮಾನ ನಿಲ್ದಾಣವನ್ನು ವಾಣಿಜ್ಯ ಬಳಕೆಗೆ ಪುನರಾರಂಭಿಸುವುದು, ಸಾಗರಮಾಲಾ 2.0 ಯೋಜನೆಯಡಿ ₹16,561 ಕೋಟಿ ಮೌಲ್ಯದ 176 ಯೋಜನೆಗಳಿಗೆ ಅನುಮೋದನೆ, ರಾಯಚೂರಿನಲ್ಲಿ AIIMS ಸ್ಥಾಪನೆ, ತೆಂಗು ಹಾಗೂ ಅಡಿಕೆ ಬೆಳೆಗಳ ಕೀಟ ನಿಯಂತ್ರಣಕ್ಕೆ ₹1,438.59 ಕ...
ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ಡಿಜಿ & ಐಜಿಪಿ ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಅಕ್ರಮ ಮರಳು ದಂಧೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಗಂಭೀರ ಸವಾಲು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಸುತ್ತೋಲೆಯ ಪ್ರಕಾರ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸಬೇಕು. ಅಕ್ರಮ ಸಾಗಣೆ, ಸಂಗ್ರಹಣೆ ತಡೆದು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಹೊಣೆಗಾರಿಕೆ ಸಂಬಂಧಿತ ಪೊಲೀಸ್ ಅಧಿಕಾರಿಗಳದ್ದಾಗಿರುತ್ತದೆ.ರಾಜ್ಯಾಂತರ ಗಡಿಗಳಲ್ಲಿ ನಡೆಯುವ ಅಕ್ರಮ ಮರಳು ಸಾಗ...
ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಿ, ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು, ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಯುವಜನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಸಭಾಂಗಣದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ವಿಶೇಷ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್...
ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಯುವಜನರಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ "ಜಂಗಲ್ ಜರ್ನಿ 2026" ಎಂಬ ಒಂದು ದಿನದ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ಯಾಥೋಲಿಕ ಯುವ ಸಂಚಲನ (ICYM) ಸಂತ ಜಾನ್ ಪೌಲ್ ICYM ವಲಯ, ಕರ್ನಾಟಕ ಅರಣ್ಯ ಇಲಾಖೆ, ವನ ಚಾರಿಟಬಲ್ ಟ್ರಸ್ಟ್, CASK ಸೆಂಟಿನರಿ ಟ್ರಸ್ಟ್ ಹಾಗೂ MIJARC ಸಹಯೋಗದಲ್ಲಿ ಕಾಂತಾವರ ಅರಣ್ಯ ಪ್ರದೇಶದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಕುಂದಾಪುರ ವಲಯದ ಮಾರ್ಗದರ್ಶನದಲ್ಲಿ ಅರಣ್ಯ ಬೀಟ್ ಅಧಿಕಾರಿ ಚಂದ್ರಶೇಖರ್ ಅವರು ಅರಣ್ಯ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮತ್ತು ಪರಿಸರ ರಕ್ಷಣೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.ಕಾಂತಾವರ ಫಾರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಅರುಣ್ ಅವರು ಅರಣ್ಯದ ಮಹತ್ವ, ಪ್ರಸ್ತುತ ಅರಣ್ಯಗಳ ಸ್ಥಿತಿ ಹಾಗೂ ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಒಟ್ಟು 67 ಯುವಜನರು ಭಾಗವಹಿಸಿ ಅರಣ್ಯ ಸಂರಕ್ಷಣೆ ಕುರಿತ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ವಂ. ರಿಚರ್ಡ್ ಡಿ'ಸೋಜಾ (ICYM ವಲಯ ನಿರ...
ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರು ದಕ್ಷಿಣ ಮತ್ತು ತುಮಕೂರು ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಕೇಂದ್ರದ ಈ ಹೇಳಿಕೆ ಮಹತ್ವ ಪಡೆದಿದೆ. ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದರು. ರಾಜ್ಯ ಸರ್ಕಾರದ ಮನವಿಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬೆಂಗಳೂರಿನ ಸುತ್ತಮುತ್ತ ಗುರುತಿಸಲಾದ ಮೂರು ಪ್ರಸ್ತಾವಿತ ಸ್ಥಳಗಳಲ್ಲಿ ಪೂರ್ವ-ಸಾಧ್ಯತಾ ಅಧ್ಯಯನ ನಡೆಸಿ, ಅದರ ವರದಿಯನ್ನು ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯಡಿ ಅಗತ್ಯವಿರುವ ಅಧಿಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಇದುವರೆಗೆ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಸಚಿವಾಲಯ ತಿಳಿಸಿದೆ.ರಾಜ್ಯ ಸರ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣ...
‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ನೈತಿಕತೆ, ಸತ್ಯ ಮತ್ತು ಬದ್ಧತೆಯ ವಿಚಾರದಲ್ಲಿ ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಸಿ.ಟಿ ರವಿ ಸೇರಿದಂತೆ ಬಿಜೆಪಿಗರ ಎದೆ ಸೀಳಿದರೆ ನಾಲ್ಕಕ್ಷರಗಳೂ ಸಿಗುವುದಿಲ್ಲ, ಜೊತೆಗೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ, ಆತ್ಮಸಾಕ್ಷಿಗಳೂ ಕಾಣುವುದಿಲ್ಲ ಎಂದಿದ್ದಾರೆ. "ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಒಂದು ಸುಳ್ಳಿಗೆ ಮತ್ತೊಂದು ಸುಳ್ಳನ್ನು ಪೋಣಿಸುವ ಸಿ.ಟಿ. ರವಿ ಅವರಂತಹವರು ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ" ಎಂದು ಆರೋಪಿಸಿದ್ದಾರೆ. "ಸಿ.ಟಿ. ರವಿ ಸೇರಿದಂತೆ ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ದೊಡ್ಡ ಮಟ್ಟದ ಕೋಮು ಕಲಹ ಸೃಷ್ಟಿಸಲು ಸಾಧ್ಯವಾಗದ ಕಾರಣ ಬಿಜೆಪಿ ಅಸಹನೀಯವಾಗಿ ವರ್ತಿಸುತ್ತಿದೆ" ಎಂದು ಅವರು ಟೀಕಿಸಿದ್ದಾರೆ.ನೀಟ್ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಧರ್ಮವನ್ನು ಎಳೆದು...
ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ಸುಮಾರು ₹800 ಕೋಟಿ ಮೊತ್ತದ ಡೀಲ್ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲು ವಿಫಲವಾಗಿದ್ದು, ಹಣ ನೀಡಿ ಅಕ್ರಮವಾಗಿ ಹುದ್ದೆ ಪಡೆದಿರುವ ಆರೋಪಗಳಿವೆ ಎಂದು ಹೇಳಿದರು.ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 350ಕ್ಕೂ ಹೆಚ್ಚು ಅಂಕ ಗಳಿಸಲು ಸಾಧ್ಯವಾಗಿಲ್ಲ. ಆದರೆ ವಿಶ್ವವಿದ್ಯಾಲಯದಲ್ಲಿ ಸಾಧಾರಣ ಅಂಕ ಪಡೆದ ಕೆಲ ಅಭ್ಯರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 400ಕ್ಕೂ ಹೆಚ್ಚು ಅಂಕ ಗಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಹುದ್ದೆಗಳ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣದಲ್ಲಿ ಇಲಾಖಾ ಮಟ್ಟದ ತನಿಖೆ ನಡೆಸುವುದರಿಂದ ಪ್ರಯೋಜನವ...