
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣ...









