Tuesday, January 27

ರಾಜ್ಯ

ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಂಟು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. #WATCH | Chitradurga, Karnataka | IGP Dr BR Ravikante Gowda says, "The accident happened at 2 am... A container crossed the divider and hit a moving bus... Three people are missing... Hopefully, they are alive... One person is at risk and has been taken to the hospital for… https://t.co/aTrDHKnYD9 pic.twitter.com/IkKiOl2dKv— ANI (@ANI) December 25, 2025 ಕಂಟೇನರ್ ಚಾಲಕ ಕೂಡ ಸಾವನ್ನಪ್ಪಿದ್ದಾರೆ. ಒಟ್ಟು, ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯ ದೇಹದ 20% ಸುಟ್ಟುಹೋಗಿರುವುದರಿಂದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ...
ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು.ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ… pic.twitter.com/OmmTmqIuaf— Ramalinga Reddy (@RLR_BTM) December 25, 2025 ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ....
SDPT REUNION; ಜಗತ್ತಿನ ನಾನಾ ದೇಶಗಳಿಂದ ಕಟೀಲಿಗೆ ಮರಳಿದ ಹಳೆಯ ವಿದ್ಯಾರ್ಥಿಗಳು

SDPT REUNION; ಜಗತ್ತಿನ ನಾನಾ ದೇಶಗಳಿಂದ ಕಟೀಲಿಗೆ ಮರಳಿದ ಹಳೆಯ ವಿದ್ಯಾರ್ಥಿಗಳು

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: 'ಗುರುಗಳನ್ನು ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ರೋಗಿಗಳು ತಮ್ಮ ಕೆಲಸ ಮುಗಿದ ನಂತರ ಮರೆತುಬಿಡುತ್ತಾರೆ' ಎಂಬುದು ಜನರಾಡಿಕೊಳ್ಳುತ್ತಿರುವ ಮಾತುಗಳು. ಆದರೆ, 'ಬದುಕಿಗೆ ರೂಪಕೊಟ್ಟ ಗುರುಗಳೇ ಸರ್ವಸ್ವ' ಎಂದು ಸಾರಿ ಹೇಳುವವರೂ ಇದ್ದಾರೆ. ಅದಕ್ಕೆ ಸಾಕ್ಷಿಯಾಗಿದ್ದೇ ಪುರಾಣ ಪ್ರಸಿದ್ಧ ಕಟೀಲು ದೇವಸ್ಥಾನದ ಅಧೀನದ SDPT ಕಾಲೇಜಿನ ಹಳೆಯ ವಿದ್ಯಾರ್ಥಿಗಳು. ಈ ಕಾಲೇಜು ಸುಮಾರು 3 ದಶಕಗಳ ಹಿಂದೆ ಅಸ್ತಿತ್ವಕ್ಕೆ ಬಂದ ವಿದ್ಯಾಸಂಸ್ಥೆ. ಆಗ ಕುಗ್ರಾಮದಂತಿದ್ದ ಕಟೀಲು ಸಮೀಪದ ಗುಡ್ಡ ಪ್ರದೇಶದಲ್ಲಿ ತಲೆ ಎತ್ತಿದ್ದ ಈ ಶ್ರೀ ದುರ್ಗಾಪರಮೇಶ್ವರಿ ಕಾಲೇಜು ಇದೀಗ ದೇಶಾದ್ಯಂತ ಹೆಸರುಗಳಿಸಿದೆ. ಗುಡ್ಡದಲ್ಲಿ ಕಾಲೇಜು ಆರಂಭದ ದಿನಗಳಲ್ಲಿ ' ಅಷ್ಟು ಎತ್ತರ ಹತ್ತುವವರು ಯಾರು?' ಎಂದು ಪ್ರಶ್ನಿಸಿದ್ದವರೇ ಹೆಚ್ಚು ಮಂದಿ. ವಾಸ್ತವ ಏನೆಂದರೆ, 'ಈ ಕಾಲೇಜಿನಲ್ಲಿ ಕಲಿತು ಎತ್ತರಕ್ಕೆ ಏರಿದವರೇ ಹೆಚ್ಚು ಮಂದಿ' ಈ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಹತ್ತಾರು ದೇಶಗಳಲ್ಲಿ ಪ್ರತಿಷ್ಠಿತ ಹುದ್ದೆಗಳಲ್ಲಿದ್ದಾರೆ. ದಶಕದ ಹಿಂದೆ, ಅಕ್ಷರ ದಾಸೋಹಕ್ಕೆ ಕಟೀಲು ದೇಗುಲದ ಅನ್ನ ದಾಸೋಹ ಸ್ಫೂರ್ತಿಯಾಗಿ...

ಹಿರಿಯೂರು ಬಳಿ ಭೀಕರ ಅಪಘಾತ; 9 ಮಂದಿ ಸಜೀವ ದಹನ

Focus, ಪ್ರಮುಖ ಸುದ್ದಿ, ರಾಜ್ಯ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಅಪಘಾತಕ್ಕೀಡಾಗಿದೆ. ಡಿಕ್ಕಿಯಾದ ತಕ್ಷಣವೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆಗ ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಕ್ ರಸ್ತೆ ವಿಭಜಕವನ್ನು ದಾಟಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಟ್ರಕ್ ಚಾಲಕ ಕೂಡಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇ ಗೌಡ, ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳೂ ಸ್ಥಳ...
ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಳ್ಳಾರಿ ಜೀನ್ಸ್ ಪಾರ್ಕ್- ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಬಳ್ಳಾರಿಯನ್ನು ಜವಳಿ ಉದ್ಯಮದ ಭವಿಷ್ಯದ ಹಬ್ ಆಗಿ ರೂಪಿಸುವತ್ತ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಬಳ್ಳಾರಿ ಜೀನ್ಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನಗಳ ದರವನ್ನು ಎಕರೆಗೆ ₹1.35 ಕೋಟಿಯಿಂದ ₹67.50 ಲಕ್ಷಕ್ಕೆ ಇಳಿಸಲಾಗಿದ್ದು, ಇದರಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಣೆ ಸಾಧ್ಯವಾಗಿದೆ ಎಂದವರು ತಿಳಿಸಿದ್ದಾರೆ. ದರ ಇಳಿಕೆಯೊಂದಿಗೆ ಸೌಲಭ್ಯಗಳ ವಿಸ್ತರಣೆ ಮಾಡಲಾಗಿದ್ದು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಅವಕಾಶದ ಹೊಸ ಬಾಗಿಲು ತೆರೆದಿದೆ. ಇದರ ಪರಿಣಾಮವಾಗಿ ನೇರ–ಪರೋಕ್ಷ ಉದ್ಯೋಗ ಸೃಷ್ಟಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಮತ್ತು ಪೂರಕ ವಲಯಗಳ ಬೆಳವಣಿಗೆ ಸಾಧ್ಯವಾಗಲಿದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಆರ್ಥಿಕ ಸಬಲೀಕರಣಕ್ಕೆ ಬಳ್ಳಾರಿ ಜೀನ್ಸ್ ಪಾರ್ಕ್ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದರು. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದ ಸಿಎಂ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದರು....
ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ - ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು....
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದರು....
ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ— Janata Dal Secular (@JanataDal_S) December 22, 2025...
ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡುವ ಖಾತರಿ ಯೋಜನೆ ಇದಾಗಿ...