
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಸದಸ್ಯರನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ.
15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ ಕೆಳಕಂಡ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಮುಜರಾಯಿ ಇಲಾಖೆ ಆಯುಕ್ತರು ಈ ಸಮಿತಿಗೆ...