Tuesday, January 27

Update

ಜಾತಿ ಗಣತಿ ವರದಿ: ಗುರುವಾರದ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಸಾಧ್ಯತೆ

ಜಾತಿ ಗಣತಿ ವರದಿ: ಗುರುವಾರದ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಸಾಧ್ಯತೆ

Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿರುವ ಎಂದು ಗೃಹ ಸಚಿವ ಪರಮೇಶ್ವರ್, ಅನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಹೇಳಿದ್ದಾರೆ. ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿರುವ ಪರಮೇಶ್ವರ್, ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ಪರಾಮರ್ಶಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು. ಈ ವರ್ದಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿರುವಾಗಲೇ ಸಿದ್ದರಾಮಯ್ಯ ಸರ್ಕಾರ ತಮ್ಮದೇ ಆದ ಕ್ರಮಕ್ಕೆ ಮುಂದಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ....
HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕರ್ನಾಟಕದಲ್ಲೇ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ HMPV ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಜ್ವರದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 8 ತಿಂಗಳ ಮಗುವಿಲ್ಲಿ ಈ ಸೋಂಕು ದೃಢಪಟ್ಟಿದೆ. ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....