
ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಆಗಸ್ಟ್ 26ಕ್ಕೆ ರಿಲೀಸ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಬಾರಿ ಮುಂದೂಡಿಕೆಯಾಗಿದ್ದ ಈ ಚಿತ್ರ ಇದೇ ವರ್ಷದ ಆಗಸ್ಟ್ 26ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಒಪ್ಪಿಕೊಂಡಿರುವ ಮೊದಲ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಮೇಲೆ ಸಿನಿಪ್ರಿಯರ ನಿರೀಕ್ಷೆ ಹೆಚ್ಚಾಗಿದೆ. ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ಹೊಣೆ ಹೊತ್ತಿದೆ.ಮೊದಲಿಗೆ ನಿಗದಿಯಾಗಿದ್ದ ಬಿಡುಗಡೆ ದಿನಾಂಕವನ್ನು ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಬಳಿಕ ಚಿತ್ರದ ಜಾಗತಿಕ ಮಾರುಕಟ್ಟೆ ವಿಸ್ತರಣೆ ಮತ್ತು ಪ್ರಚಾರ ಕಾರ್ಯತಂತ್ರದ ಕಾರಣದಿಂದ ಮತ್ತೊಮ್ಮೆ ಬಿಡುಗಡೆ ದಿನಾಂಕ ಬದಲಾವಣೆ ಮಾಡಲಾಗಿತ್ತು.ಚಿತ್ರದಲ್ಲಿ ಯಶ್‌ಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಹಾಗೂ ಕಿಯಾರಾ ಅಡ್ವಾಣಿ ನಟಿಸಿದ್ದು, ಹಲವು ಪ್ರಮುಖ ...









