
ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್
ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶದಿಂದ ಅನುಮತಿ ಪಡೆದು ದುಪ್ಪಟ್ಟು ದರದಲ್ಲಿ ಖರೀದಿ ನಡೆಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.ಈ ಬಗ್ಗೆ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿ ಮಾಡಿರುವ ಆರೋಪ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರದಲ್ಲಿ ಕರಾವಳಿಯ ಬಿಜೆಪಿ ನಾಯಕರೂ ಯು.ಟಿ.ಖಾದರ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.ಈ ಬೆಳವಣಿಗೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರೂ ಆದ ಮನೋರಾಜ್ ರಾಜೀವ್, ಬಿಜೆಪಿ ನಾಯಕರ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಿಜೆಪಿ ನಾಯಕರು ಹಲವಾರು ರೀತಿ ಹಗರಣಗಳಲ್ಲಿ ಭಾ...









