Wednesday, January 28

ವೀಡಿಯೊ

“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..

“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯ ಕೋರಿ ಪೋಸ್ಟ್ ಹಾಕಿರುವ ಧನಂಜಯ್, 'ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ' ಎಂದು ಕೋರಿದ್ದಾರೆ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗೋಕು ಎಂದೂ ಬರೆದುಕೊಂಡಿದ್ದಾರೆ. ಸ್ತ್ರೀರೋಗ ತಜ್ಞೆಯಾಗಿರುವ ಧನ್ಯತಾ ಜೊತೆ ಡಾಲಿ ಧನಂಜಯ ಅವರು ಅನೇಕ ವರ್ಷಗಳ ಪರಿಚಯ ಹೊಂದಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಇವರು ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ.   View this post on Instagram   A post shared by Daali Dhana...
‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು 'ಸಿಂಗಂ ಅಗೈನ್' ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ. ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು 'ಸಿಂಗಂ ಅಗೈನ್' ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ. https://www.youtube.com/watch?v=MD7v0-igVIM&t=64s&ab_channel=JioStudios...
ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ‘Savarkar was a beef eater’?! 😡 Shocking to see Congress leaders like @dineshgrao spreading lies about Veer Savarkar ! His sacrifices for India’s freedom cannot be tarnished by cheap political narratives. Congress’s hatred for Marathas and Maharashtra is clearly visible!… pic.twitter.com/8Q2yNYY5Pb — BJP Karnataka (@BJP4Karnataka) October 3, 2024 ಇದೇ ವೇಳೆ, ದಿನೇಶ್ ಗುಂಡೂರಾವ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿ...
ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. 'ಭೈರಾದೇವಿ' ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ. https://www.youtube.com/watch?v=Jr3up-ZFm4A&t=4s...
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ. https://www.youtube.com/watch?v=4noS-o_9q0o&t=2s...
ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಚನ್ನಪಟ್ಟಣ ಬಿಜೆಪಿಗೆ, ಸಂಡೂರು ಜೆಡಿಎಸ್‌ಗೆ..? ಏನಿದು ರಹಸ್ಯ ತಂತ್ರ

ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪೈಕಿ ಯಾವ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಕಾಂಗ್ರೆಸ್ ರಣತಂತ್ರಕ್ಕೆ ಪ್ರತಿಯಾಗಿ ಜೆಡಿಎಸ್-ಬಿಜೆಪಿ ಕ್ಷೇತ್ರಗಳ ಅದಲು ಬದಲು ಸೂತ್ರಕ್ಕೆ ಮುಂದಾದಂತಿದೆ. ಚನ್ನಪಟ್ಟಣದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ ಮತ್ತೊಮ್ಮೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ದತೆ ನಡೆಸುತ್ತಿದೆ. ಈ ವಿಚಾರದಲ್ಲಿ ಬಂದ ಜೆಪಿ-ಜೆಡಿಎಸ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದೇ ವೇಳೆ, ಬೆಂಗಳೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಈಗಾಗಲೇ ಕೇಂದ್ರ ನಾಯಕರನ್ನೂ ಭೇಟಿ ಮಾಡಿದ್ದ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು. ಸಂಡೂರನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಬಿಜೆಪಿಗೆ ಕೇಳಲು ಸಲಹೆ ವ್ಯಕ್ತವಾಯಿತೆನ್ನಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿ, ಜೆಡಿಎಸ್‌ ಮನವೊ...
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ. ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. 'ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. https://youtu.be/HNYA6bqL6bU?si=nIRtqhPMISPhVIbJ...
ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ.. ‘ದೀಪಜ್ಯೋತಿ’ಯನ್ನು ಮುದ್ದಾಡಿದ ಮೋದಿ ಮೋಡಿಗೆ ನೆಟ್ಟಿಗರ ಸಕತ್ ಲೈಕ್ಸ್

ಪ್ರಧಾನಿ ನಿವಾಸಕ್ಕೆ ಹೊಸ ಅತಿಥಿ.. ‘ದೀಪಜ್ಯೋತಿ’ಯನ್ನು ಮುದ್ದಾಡಿದ ಮೋದಿ ಮೋಡಿಗೆ ನೆಟ್ಟಿಗರ ಸಕತ್ ಲೈಕ್ಸ್

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಈ ಒಂದು ಮುದ್ದಾದ ಅತಿಥಿ ಜೊತೆಗಿನ ವಿಡಿಯೋವನ್ನು ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. हमारे शास्त्रों में कहा गया है - गाव: सर्वसुख प्रदा:'। लोक कल्याण मार्ग पर प्रधानमंत्री आवास परिवार में एक नए सदस्य का शुभ आगमन हुआ है। प्रधानमंत्री आवास में प्रिय गौ माता ने एक नव वत्सा को जन्म दिया है, जिसके मस्तक पर ज्योति का चिह्न है। इसलिए, मैंने इसका नाम 'दीपज्योति'… pic.twitter.com/NhAJ4DDq8K — Narendra Modi (@narendramodi) September 14, 2024 ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಪುಟ್ಟ ಕರು ಆಗಮಿಸಿದೆ. ಆ ಮುಗ್ದ ಕರುವನ್ನು ಪ್ರಧಾನಿ ಮೋದಿ ಮುದ್ದಾಡಿದ್ದಾರೆ. ಈ ಬಗ್ಗೆ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣ 'Xನಲ್ಲಿ ಮೋದಿಯವರು ಹಂಚಿಕೊಂಡಿದ್ದು, ಕರುವಿನ ಜೊತೆ ಆಟವಾಡುವ ಸನ್ನಿವೇಶ ಅದಾಗಿದೆ. ಮೋದಿ ಹೋದಲ್ಲೆಲ್ಲ ಅವರ ಜೊತೆಯಲ್ಲೇ ಕರು ಹೋಗುತ್ತದೆ. ಮೋದಿ ದೇವರ ಕೋಣೆಯಲ್ಲಿ ಪೂಜೆಯಲ್ಲಿದ್ದಾಗಲೂ...
ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದ ‘ಅಮ್ಮು’

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಇದೀಗ 'ಅಮ್ಮು' ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ 'ಅಮ್ಮು' ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. https://www.youtube.com/watch?v=VkJpLGrKEE0&t=81s