
‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ
ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. View this post on Instagram
A post shared by Darshan Thoogudeepa Shrinivas (@darshanthoogudeepashrinivas)'ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಅದರಿಂದ ಡ...









