Friday, May 15

CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮಾತ್ರವಲ್ಲ, ಬೆಲೆ ಏರಿಕೆಯ ಬಿಸಿ CNG ಗ್ರಾಹಕರಿಗೂ ತಟ್ಟಿದೆ. ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ತಂದಿಟ್ಟ ಫಜೀತಿಯಿಂದಾಗಿ ಭಾರತದಲ್ಲೂ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿಡೇ. ಇದರಿಂದಾಗಿ ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಯಾಗಿದೆ.

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು, ಜಾಗತಿಕ ಇಂಧನ ಮಾರುಕಟ್ಟೆಯ ಅಸ್ಥಿರತೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದರ ಏರಿಕೆಗೆ ಕಾರಣವಾಗಿದೆ ಎಂದು ಕಂಪನಿಗಳು ತಿಳಿಸಿವೆ.

ದೆಹಲಿಯಲ್ಲಿ ಸಿಎನ್‌ಜಿ ದರ ₹77.09ರಿಂದ ₹79.09ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ ₹84 ತಲುಪಿದೆ.

ಈ ದರ ಏರಿಕೆಯ ಬಿಸಿ ಸಾರ್ವಜನಿಕ ಸಾರಿಗೆ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.