‘ಬೃಂದಾವನ’ ಸೀರಿಯಲ್ ನಟನ ವಿರುದ್ಧ FIR

‘ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಯುವತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ವರುಣ್‌ ವಿರುದ್ಧ ಕೇಸ್‌ ದಾಖಲಾಗಿದೆ. ತಮ್ಮ ಖಾಸಗಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಈ ಬಗ್ಗೆ ದೂರು ಸ್ವೀಕರಿಸಿರುವ ಬಸವೇಶ್ವರ ಸೆನ್ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.