Friday, January 30

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್

ಮಂಡ್ಯ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದ ಗಲಭೆ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲ‌ ಕೋಮುಗಲಭೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ, ಫೋಟೋ ಹಂಚಿರುವ ಆರೋಪದಲ್ಲಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀಡಿಯೋ, ಫೊಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ನೀಡಿತುವ ಆರೋಪಡಿ ಎಫ್​​ಐಆರ್ ದಾಖಲಾಗಿದೆ.