
ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಇನ್ನು ಮುಂದೆ ಬಿಬಿಎಂಪಿ ಬದಲು ಜಿಬಿಎ ನಗರದ ಆಡಳಿತವನ್ನು ನೋಡಿಕೊಳ್ಳಲಿದೆ.
ಜಿಬಿಎ ಅಡಿಯಲ್ಲಿ . ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಹೆಸರುಗಳಲ್ಲಿ ಐದು ಹೊಸ ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಬಿಬಿಎಂಪಿಯ 198 ವಾರ್ಡ್‌ಗಳನ್ನು ಈ ಐದು ಪಾಲಿಕೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಪ್ರತಿಯೊಂದು ಪಾಲಿಕೆಗೆ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ರಚಿಸಲಾಗಿದೆ.
‘ಜಿಬಿಎ’ಗೆ ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರಿನ ಮೂವರು ಸಂಸದರು, ಹಾಗೂ ನಗರದ ಶಾಸಕರನ್ನು ಒಳಗೊಂಡಂತೆ 73 ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ.
ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು:
ಬೆಂಗಳೂರು ಕೇಂದ್ರ ನಗರ ಪಾಲಿಕೆ: ಸಿವಿರಾಮನ್‌ನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ಶಾಂತಿನಗರ, ಶಿವಾಜಿನಗರ, ಪುಲಕೇಶಿನಗರ ಜೊತೆಗೆ ಕೆಲವು ನಗರ ವಾರ್ಡ್‌ಗಳು.
ಬೆಂಗಳೂರು ಪೂರ್ವ ನಗರ ಪಾಲಿಕೆ: ಕೆ.ಆರ್.ಪುರ, ಮಹದೇವಪುರ (ಬೆಳ್ಳಂದೂರು ವಾರ್ಡ್ ಹೊರತುಪಡಿಸಿ).
ಬೆಂಗಳೂರು ಪಶ್ಚಿಮ ನಗರ ಪಾಲಿಕೆ: ಬಸವನಗುಡಿ, ದಾಸರಹಳ್ಳಿ (ಚಿಕ್ಕಸಂದ್ರ, ರಾಜಗೋಪಾಲನಗರ, ಹೆಗ್ಗನಹಳ್ಳಿ), ಗೋವಿಂದರಾಜನಗರ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಪದ್ಮನಾಭನಗರದ ಕೆಲವು ಭಾಗಗಳು, ರಾಜಾಜಿನಗರ, ರಾಜರಾಜೇಶ್ವರಿ ನಗರದ ಕೆಲವು ಭಾಗಗಳು, ವಿಜಯನಗರ, ಯಶವಂತಪುರದ ಕೆಲವು ವಾರ್ಡ್‌ಗಳು.
ಬೆಂಗಳೂರು ಉತ್ತರ ನಗರ ಪಾಲಿಕೆ: ಬ್ಯಾಟರಾಯನಪುರ, ದಾಸರಹಳ್ಳಿಯ ಕೆಲವು ವಾರ್ಡ್‌ಗಳು, ಹೆಬ್ಬಾಳ, ರಾಜರಾಜೇಶ್ವರಿ ನಗರದ ಕೆಲವು ವಾರ್ಡ್‌ಗಳು, ಸರ್ವಜ್ಞನಗರ, ಯಲಹಂಕ, ಪುಲಕೇಶಿನಗರದ ಭಾಗ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ: ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಜಯನಗರ, ಮಹದೇವಪುರದ ಬೆಳ್ಳಂದೂರು ವಾರ್ಡ್, ಪದ್ಮನಾಭನಗರದ ಕೆಲವು ವಾರ್ಡ್‌ಗಳು, ರಾಜರಾಜೇಶ್ವರಿ ನಗರದ ಒಂದು ವಾರ್ಡ್, ಯಶವಂತಪುರದ ಹೆಮ್ಮಿಗೆಪುರ ವಾರ್ಡ್.
ಬೆಂಗಳೂರಿನ ಅಭಿವೃದ್ಧಿಯೇ ನಮ್ಮ ಧ್ಯೇಯ!
ಬೆಂಗಳೂರಿನ ಸಾರ್ವಜನಿಕ ಪ್ರಾಧಿಕಾರಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಸೇರಿದಂತೆ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇಂದಿನಿಂದ ಅಧಿಕೃತವಾಗಿ ಕಾರ್ಯಾರಂಭಿಸಿದೆ. ಇದರನ್ವಯ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ನಗರದ ಸರ್ವಾಂಗೀಣ ಅಭಿವೃದ್ಧಿಯ ಹೊಸ… pic.twitter.com/JvgOqXhayq
— DK Shivakumar (@DKShivakumar) September 2, 2025