Sunday, December 7

ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವದ ಮತ್ತಷ್ಟು ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ.

ಕರ್ನಾಟಕದಾದ್ಯಂತ ಮೇ 17ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.