Friday, September 25

ರಾಜ್ಯದಲ್ಲಿ HMP ಗುಮ್ಮ..! ಕ್ಷಿಪ್ರ ಕ್ರಮ ಸಂಬಂಧ ಅಧಿಕಾರಿಗಳ ತುರ್ತು ಸಭೆ..

ಬೆಂಗಳೂರು: ಕರ್ನಾಟಕದಲ್ಲಿ ಎಚ್‌ಎಂಪಿ ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ಷಿಪ್ರ ಕ್ರಮಕ್ಕೆ ಮುಂದಾಗಿದೆ. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಸೋಮವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಮೊಹಮ್ಮದ್‌ ಮೊಹಸೀನ್‌, ನಿರ್ದೇಶಕರಾದ ಡಾ. ಬಿ.ಎಲ್‌. ಸುಜಾತಾ ರಾಥೋಡ್‌ ಅವರ ನೇತೃತ್ವದಲ್ಲಿ ಎಲ್ಲಾ ಜಿಲ್ಲಾ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯಿತು.

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ, ಚಿಕಿತ್ಸೆ ತಯಾರಿ ಹಾಗೂ ಇತರೆ ಪರಿಣಾಮಕಾರಿ ಕ್ರಮಗಳ ಬಗ್ಗೆ ವೀಡಿಯೋ ಕಾನ್ಸರೆನ್ಸ್‌ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.