ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಹೆಚ್ಚಳ; ಇಂದಿನಿಂದ ಹೊಸ ದರ ಅನ್ವಯ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಆಗಸ್ಟ್ 1 ರಿಂದ ಅನ್ವಯವಾಗುವಂತೆ ಹೆಚ್ಚಿಸಿವೆ.

ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 8.50 ರೂಪಾಯಿ ದುಬಾರಿಯಾಗಿದೆ. ಈ ದರ ಪರಿಷ್ಕರಣೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಷ್ಟೇ ಅನ್ವಯವಾಗಲಿದ್ದು, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿತರಕರು ತಿಳಿಸಿದ್ದಾರೆ.