Thursday, January 29

ಕರಾವಳಿ: ಮೇಲ್ಮನೆ ಚುನಾವಣೆಗೆ ಒಟ್ಟು ನಾಲ್ವರ ನಾಮಪತ್ರ

ಮಂಗಳೂರು: ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣಾ ಅಖಾಡ ರಂಗೇರಿದೆ. ಈ ವರೆಗೂ ಬಿಜೆಪಿ ಪ್ರತಿನಿಧಿಸುತ್ತಿದ್ದ ಸ್ಥಾನಕ್ಕೆ ಉಪಚುನಾವಣೆ ಏರ್ಪಟ್ಟಿದ್ದು, ಐವರು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕಿಶೋರ್ ಬಿ.ಆರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್ ಎಸ್. ಮತ್ತು ಮುಹಮ್ಮದ್ ರಿಯಾಝ್ (ಎಸ್‌ಡಿ‌ಪಿಐ), ದಿನಕರ ಉಳ್ಳಾಲ (ಪಕ್ಷೇತರ)ನಾಮಪತ್ರ ಸಲ್ಲಿಸಿದ್ದಾರೆ. ಐವರು ಅಭ್ಯರ್ಥಿಗಳಿಂದ ಎಂಟು ನಾಮಪತ್ರಗಳು ಸಲ್ಲಿಕೆಯಾಗಿದ್ದು,

ಶುಕ್ರವಾರ (ಅಕ್ಟೋಬರ್ 4) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 7 ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.