Saturday, December 6

ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಚೆಂಬೂರ್‌ನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಅಗ್ನಿ ಆಕಸ್ಮಿಕದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಮುಂಬೈನ ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5.20ರ ಸುಮಾರಿಗೆ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೆಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ಮೇಲಿನ ಮಹಡಿಗೆ ವ್ಯಾಪಿಸಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.