Blog

  • ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

    ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್ ಸುದರ್ಶನ್ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ .ಎಲ್ ಶಂಕರ್, ಎಲ್.ಹನುಮಂತಯ್ಯ, ಬಿ.ಆರ್.ಪಾಟೀಲ್ ಉಪಸ್ಥಿತಿಯಲ್ಲಿ  ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿ.ಆರ್ ಸುದರ್ಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದರ ಜತೆಗೆ ರಾಜ್ಯಪಾಲರು ನೋಟೀಸ್ ನೀಡುವ ಮೂಲಕ ಆತುರದ ನಿರ್ಧಾರಕ್ಕೆ ಬಂದಿದ್ದು, ಅವರು ಆತುರ ನಿರ್ಧಾರ ಮಾಡಬಾರದು ಎಂದು ಮನವಿ ಮಾಡುತ್ತೇವೆ ಎಂದರು.

    ಸಿದ್ದರಾಮಯ್ಯ ವಿರುದ್ಧದ ತನಿಖೆ ಬಗ್ಗೆ ಯಾರು ಮಾನವಿ ಮಾಡುತ್ತಿದ್ದಾರೆ. ಅವರ ಹಿನ್ನೆಲೆಯನ್ನು ರಾಜ್ಯಪಾಲರು ಪರಿಶೀಲಿಸಬೇಕು. ಕಾನೂನಿನ ನಿಯಮಗಳನ್ನು ಗಮನಹರಿಸಬೇಕು. ಅವರು ಬಿಜೆಪಿ ಹಾಗೂ ಜೆಡಿಎಸ್ ಅವರ ರೀತಿ ನಡೆದುಕೊಂಡರೆ ಸಂವಿಧಾನಕ್ಕೆ ಮಾಡುವ ಅಪಚಾರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ 136 ಸ್ಥಾನಗಳನ್ನು ಗೆದ್ದು ಆರಿಸಿಬಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಅಂತಿಮವಾಗಿ ಜನ ಈ ಆರೋಪವನ್ನು ತಿರಸ್ಕರಿಸುತ್ತಿದ್ದಾರೆ ಎಂದವರು ಹೇಳಿದರು.

    ಇದೇ ವೇಳೆ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ದೇಶದಲ್ಲಿ ಅಧಿಕಾರ ಮಾಡುತ್ತಿರುವ ಎನ್ ಡಿಎ ಸರ್ಕಾರ ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸುವುದನ್ನು ಹವ್ಯಾಸವಾಗಿ ಮಾಡಿಕೊಂಡಿದ್ದು, ಅನೇಕ ಕಡೆಗಳಲ್ಲಿ ಯಶಸ್ಸು ಸಾಧಿಸಿದ್ದಾರೆ. ಗೋವಾ, ಮಹಾರಾಷ್ಟ್ರ, ಮಧ್ಯ ಪ್ರದೇಶ ಸೇರಿದಂತೆ ಅನೇಕ ಕಡೆ ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಸರ್ಕಾರದ ಮುಖ್ಯಸ್ಥರನ್ನು ಗುರಿಯಾಗಿಸುವುದು, ಮಂತ್ರಿಗಳನ್ನು ಗುರಿಯಾಗಿಸುವುದು, ಪಕ್ಷಗಳನ್ನು ಒಡೆಯುವ ಮೂಲಕ ಸರ್ಕಾರ ಅಶ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

    ಈ ಪರಿಪಾಠ ಮುಂದುವರಿದ ಭಾಗವೇ ಕರ್ನಾಟಕದಲ್ಲಿ ನಡೆಯುತ್ತಿದೆ. ಸಿದ್ದರಾಮಯ್ಯ ಅವರನ್ನು ಗುರಿ ಮಾಡಿದರೆ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಸುಲಭವಾಗುತ್ತದೆ ಎಂದು ಭಾವಿಸಿದ್ದಾರೆ. ಕಳೆದ ಐದು ದಶಕಗಳ ಕಾಲ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಉಳಿಸಿಕೊಂಡಿರು ಘನತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾನಸಿಕವಾಗಿ ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಮೂಲಕ ಸರ್ಕಾರ ಅಸ್ಥಿರಗೊಳಿಸಬಹುದು ಎಂಬ ಭ್ರಮೆಯಲ್ಲಿ ಇದ್ದಾರೆ. ಇಲ್ಲದಿದ್ದರೆ, ಸಿದ್ದರಾಮಯ್ಯ ಅವರಿಗೆ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ ವಿಚಾರದಲ್ಲಿ ಸಿದ್ದರಾಮಯ್ಯ ಅವರೇ ರಾಜೀನಾಮೆ ನೀಡಬೇಕು ಎಂದು ಗುರಿ ಮಾಡಿ ಅನೇಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

    ಇದು ರಾಜಕೀಯ ಉದ್ದೇಶದಿಂದ ಗುರಿಯಾಗಿಸುತ್ತಿರುವ ಕಾರ್ಯಚಟುವಟಿಕೆಯಾಗಿವೆ. ಬಹಳ ವರ್ಷಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಮುಖ್ಯಸ್ಥರಿಗೆ ಸಿದ್ದರಾಮಯ್ಯ ಅವರು ಮೊದಲ ಟಾರ್ಗೆಟ್. ಈ 1935ನೇ ಇಸವಿಯಿಂದ 2021-22ರಲ್ಲಿ ಪಾರ್ವತಮ್ಮನವರಿಗೆ ನಿವೇಶನ ಹಂಚಿಕೆಯಾಗುವವರೆಗೂ ಎಲ್ಲಿಯೂ ಸಿದ್ದರಾಮಯ್ಯ ಅವರು ಭಾಗಿಯಾಗಿರುವುದಕ್ಕೆ, ಪ್ರಭಾವ ಬೀರಿರುವುದಕ್ಕೆ ಪ್ರಕರಣದಲ್ಲಿ ಯಾವ ಸಂದರ್ಭದಲ್ಲೂ ದಾಖಲೆಗಳಿಲ್ಲ. ಆದರೂ ಅವರ ರಾಜೀನಾಮೆ ಕೇಳಲಾಗುತ್ತಿದೆ ಎಂದು ದೂರಿದರು.

  • ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

    ಸಿಟಡೆಲ್: ಹನಿ ಬನ್ನಿ ಟೀಸರ್ ಅನ್ನು ಸಿನಿ ಅಭಿಮಾನಿಗಳು ಸಕತ್ತಾಗಿ ಎಂಜಾಯ್ ಮಾಡಿದ್ದಾರಂತೆ. ಹೀಗೆಂದು ಸಿನಿ ತಂಡ ಸಂತಸ ಹಂಚಿಕೊಂಡಿದೆ.

    ನಟಿ ಸಮಂತಾ ರೂತ್ ಪ್ರಭು ಮತ್ತು ವರುಣ್ ಅಭಿನಯದ ಸಿಟಡೆಲ್: ಹನಿ ಬನ್ನಿ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. ಈ ಚಿತ್ರವನ್ನು ರಾಜ್ ಮತ್ತು ಡಿ.ಕೆ. ನಿರ್ದೇಶಿಸಿದ್ದಾರೆ. ಸಿನಿ ಲೋಕದಲ್ಲಿ ಮತ್ತೊಂದು ರಂಜನೆಯ ಕ್ಷಣಗಳಿಗೆ ಈ ಸಿನಿಮಾ ಸಾಕ್ಷಿಯಾಗಲಿದೆ ಎಂಬ ಕಮೆಂಟ್ಸ್ ಗಮನಸೆಳೆದಿದೆ.

  • ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

    ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

    ಬೆಂಗಳೂರು: ಯಾದಗಿರಿಯ ಪಿಎಸ್‌ಐ ಪರಶುರಾಮ್‌ ವರ್ಗಾವಣೆಗಾಗಿ ಲಂಚ ಕೊಡಲಾಗದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ಜನರನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಹೃದಯಾಘಾತವಾಗುವಂತೆ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್ ಕೈಗೊಂಡಿರುವ ಮೈಸೂರು ಪಾದಯಾತ್ರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, 187 ಕೋಟಿ ರೂ. ಹಣ ಉಳಿಸಲು ಹೋಗಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಈಗ ಪಿಎಸ್‌ಐ ಸತ್ತಿದ್ದಾರೆ. ಈ ಸರ್ಕಾರ ಯಾವುದೇ ಅಧಿಕಾರಿಗಳನ್ನು ಬಿಡುವುದಿಲ್ಲ ಎಙದರು.

    ಸಿದ್ದರಾಮಯ್ಯ ಅವರಿಗೆ ಇನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲು ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗುವುದು ಸೂಕ್ತ. ಕಾಂಗ್ರೆಸ್‌ನ ಲಂಚಾವತಾರದ ವಿರುದ್ಧ ನಿಲ್ಲುವವರಿಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ. ಅಂತಹವರ ಪರವಾಗಿ ನಾನು ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಅಶೋಕ್ ತಿಳಿಸಿದರು.

  • ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು 

    ಬೆಂಗಳೂರು: ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್‌ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

    ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ  ಬಿಜೆಪಿ-ಜೆಡಿಎಸ್‌ ಕೈಗೊಂಡಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡು  ಮಾತನಾಡಿದ ಅಶೋಕ್, ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ. ಅವರ ಪಕ್ಷದವರೇ 3-4 ಸಾವಿರ ಕೋಟಿ ರೂ. ಲೂಟಿಯಾಗಿದೆ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದಲಿತರ ಜಮೀನಿನ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

    ರಾಜ್ಯಪಾಲರಿಗೆ ನೋಟಿಸ್‌ ಕೊಡಲು ಅಧಿಕಾರವಿದೆಯಾ ಎಂದು ಇವರು ಪ್ರಶ್ನೆ ಮಾಡುತ್ತಾರೆ. ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಕ್ರಮ ವಹಿಸಿದ್ದರು. ಕಾಂಗ್ರೆಸ್‌ ನಾಯಕರು ಕೇವಲ ನೋಟಿಸ್‌ಗೆ ಗಢಗಢ ಎನ್ನುತ್ತಿದ್ದಾರೆ. ಕಾಂಗ್ರೆಸ್‌ ಈಗ ಒಡೆದ ಮನೆಯಾಗಿದೆ. ಇಂತಹ ಕಾಂಗ್ರೆಸ್‌ನ ಭ್ರಷ್ಟಾಚಾರದ ವಿರುದ್ಧ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ. ಕೆಂಗೇರಿಯಲ್ಲಿ ಭೂ ಸ್ವಾಧೀನ ಮಾಡಿ ಪರಿಹಾರವಾಗಿ ಎಂ.ಜಿ.ರಸ್ತೆಯಲ್ಲಿ ನಿವೇಶನ ನೀಡಿದರೆ ಅದು ನ್ಯಾಯವೇ? ನೂರಾರು ಕಾನೂನು ಪ್ರಶ್ನೆಗಳು ನಮ್ಮ ಮುಂದಿದೆ ಎಂದರು.

    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಸದನದಲ್ಲಿ ಮಾತನಾಡಿದ್ದೇವೆ. ಆದರೆ ಮುಡಾ ಹಗರಣದ ಬಗ್ಗೆ ಮಾತನಾಡಲು ಅವಕಾಶ ನೀಡಿಲ್ಲ. ಅದಕ್ಕಾಗಿ ಬೀದಿಗಿಳಿದು ಹೋರಾಡುತ್ತಿದ್ದೇವೆ. ಕಾಂಗ್ರೆಸ್‌ ವಿರೋಧ ಪಕ್ಷವಾಗಿಯೇ ಪ್ರಶ್ನೆ ಕೇಳಬೇಕಿತ್ತು. ಈಗ ನಾವು ಹೋರಾಟ ಆರಂಭಿಸಿದ ಬಳಿಕ, ರೈಲು ಹೋದ ಬಳಿಕ ಟಿಕೆಟ್‌ ಪಡೆದಂತೆ ಹಿಂದಿನ ಸರ್ಕಾರದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ. ಇದಕ್ಕೆ ಜನರು ಬೆಲೆ ಕೊಡುವುದಿಲ್ಲ. ಇವರ ಮೇಲೆ ಆರೋಪ ಬಂದಿದ್ದಕ್ಕೆ ಈಗ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೆ ಎಂದರು. ಎರಡು ಹಗರಣಗಳ ಬಗ್ಗೆ ಮೊದಲು ಕಾಂಗ್ರೆಸ್‌ ಸರ್ಕಾರ ಜನರಿಗೆ ಉತ್ತರ ನೀಡಲಿ. ನಂತರ ನಮ್ಮ ಹಿಂದಿನ ಸರ್ಕಾರದ ವಿರುದ್ಧ ತನಿಖೆ ಮಾಡಿಕೊಳ್ಳಲಿ ಎಂದರು.

  • ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

    ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮೂಲಕ ಬೆಂಗಳೂರು ದೇಶದ ಗಮನಸೆಳೆದಿದೆ. ಬೆಂಗಳೂರಿನಲ್ಲಿ ಬಿಸಿಸಿಐ ನಿರ್ಮಾಣ ಮಾಡುತ್ತಿರುವ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಉದ್ಘಾಟನೆ ನೆರವೇರಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ತಿಳಿಸಿದ್ದಾರೆ.

    45 ಅಭ್ಯಾಸದ ಪಿಚ್‌ಗಳು ಮತ್ತು ಒಲಿಂಪಿಕ್ಸ್ ಗಾತ್ರದ ಈಜುಕೊಳ ಸಹಿತ ವಿಶೇಷ ಸೌಲಭ್ಯವಿರುವ ಕ್ರಿಕೆಟ್ ಅಕಾಡೆಮಿ ಇದಾಗಿದೆ. ಈ ಅಕಾಡೆಮಿ ಬಗ್ಗೆ ಜಯ್ ಷಾ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅತ್ಯಾಧುನಿಕ ತರಬೇತಿ, ಕ್ರೀಡಾ ವಿಜ್ಞಾನ ಸೌಲಭ್ಯಗಳಿವೆ ಎಂದು ಅವರು ಪರಿಚಯಿಸಿದ್ದಾರೆ.

  • ’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ, 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದ ಹೆಚ್ಡಿಕೆ, ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು.

    ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ. ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು. ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ ಎಂದು ಶಿವಕುಮಾರ್ ಅವರೇ ಹೇಳಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ಶಿವಕುಮಾರರ ಆಸ್ತಿ ಹಿಂದೆ ಎಷ್ಟಿತ್ತು? ಒಂದು ಬ್ಲಾö್ಯಕ್ ಆಂಡ್ ವೈಟ್ ಟಿವಿ, ಡಿವಿಡಿ ಇದ್ದುದನ್ನು ಅವರ ಗುರುಗಳೇ ಹೇಳಿದ್ದಾರೆ. ಅದರ ಮೂಲಕ ಏನನ್ನು ಪ್ರದರ್ಶನ ಮಾಡಿದ್ದರು, ಅದರಿಂದ ಸಾವಿರಾರು ಕೋಟಿ ಪಡೆದರೇ ಎಂದು ಪ್ರಶ್ನಿಸಿದರು.

    ಇದೇ ವೇಳೆ, ಯಾದಗಿರಿಯಲ್ಲಿ ಪೊಲೀಸ್ ಅಧಿಕಾರಿ ಸಾವಿನ ಬಗ್ಗೆ, ಅಧಿಕಾರಿಯ ಪತ್ನಿಯ ಆರೋಪಕ್ಕೆ ಡಾ.ಪರಮೇಶ್ವರ್ ಉತ್ತರಿಸಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

  • BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

    BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

    ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಬಿಜೆಪಿ ಸಂಸದೀಯ ಸಮಿತಿ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

    ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಈ ಪಾದಯಾತ್ರೆ ಮಧ್ಯದಲ್ಲೇ ರಾಜೀನಾಮೆ ಕೊಡಲಿದ್ದಾರೆ ಎಂದರು.

    ಕುಂಟು ನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ ಅವರು ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.

  • BJP-JDS ‘ಮೈಸೂರು ಚಲೋ’ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಎಂದ ವಿಜಯೇಂದ್ರ

    ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

    ಬೆಂಗಳೂರು ಹೊರವಲಯದ ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯನ್ನು ನಗಾರಿ ಬಾರಿಸುವ ಮೂಲಕ ವಿಜಯೇಂದ್ರ ಹಾಗೂ ನಾಯಕರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂದು ಘೋಷಣೆ ಮೊಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರಕಾರವು ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ ಎಂದು ಟೀಕಿಸಿದರು.

    ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ಬೆಂಬಲ, ರಕ್ಷಣೆ ಕೊಡುತ್ತಿದ್ದಾರೆ. ಭ್ರಷ್ಟಾಚಾರ ತಮ್ಮ ಬುಡಕ್ಕೆ ಬರುವ ಆತಂಕದಿಂದ ಮುಖ್ಯಮಂತ್ರಿಗಳೇ ಅಧಿಕಾರಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

    ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ನೀಡಲು ಎಟಿಎಂ ಸರಕಾರ ಬರುತ್ತಿದೆ ಎಂದು ಚುನಾವಣೆ ವೇಳೆ ಹೇಳಿದ್ದೆವು. ಮುಡಾ ಹಗರಣ ನಡೆದುದಾಗಿ ಸಿದ್ದರಾಮಯ್ಯನವರೇ ನೇಮಿಸಿದ ಮುಡಾ ಅಧ್ಯಕ್ಷ ಮರಿಗೌಡರೇ ಹೇಳಿದ್ದಾರೆ. ಪರಿ಼ಶಿಷ್ಟ ಸಮುದಾಯಕ್ಕೆ ನಿರಂತರ ಅನ್ಯಾಯ ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಪಕ್ಷ. ಅಂಥ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕಲಿದ್ದೇವೆ ಎಂದು ವಿಜಯೇಂದ್ರ ಪ್ರಕಟಿಸಿದರು.

    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ, ಎಚ್.ಡಿ.ಕುಮಾರಸ್ವಾಮಿ, ಕು.ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್, ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌ನ ನಾಯಕ ಸುರೇಶ್, ಮಾಜಿ ಸಚಿವರು, ಬಿಜೆಪಿ- ಜೆಡಿಎಸ್ ಸಂಸದರು, ಎರಡೂ ಪಕ್ಷಗಳ ಶಾಸಕರು, ಮುಖಂಡರು, ಮಾಜಿ ಸಂಸದರು, ಮಾಜಿ ಶಾಸಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

  • ‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’; ಬಿಜೆಪಿ ಆಕ್ರೋಶ..

    ‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’ ಎಂದು ಬಿಜೆಪಿ ಆಕ್ರೋಶ.. ಪಿಎಸ್​ಐ ಸಾವಿಗೆ ಕಾರಣವಾದ ಶಾಸಕನ ಬಂಧನಕ್ಕೆ ಸಿ.ಟಿ.ರವಿ ಆಗ್ರಹ.. 

    ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ ಪಿಎಸ್​ಐ ಪರಶುರಾಮ (34) ಎಂಬವರು ಶುಕ್ರವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಪ್ರಭಾವಿಗಳಿಂದ ಹಣಕ್ಕಾಗಿ ಒತ್ತಡ ಹೇರಲಾಗಿದ್ದು ಇದರಿಂದ ನೊಂದಿದ್ದ ಪಿಎಸ್​ಐ ಪರಶುರಾಮ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಪಿಎಸ್​ಐ ಸಾವಿನ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೇಟ್ ಕಾರ್ಡ್ ಮತ್ತು ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಯಾದಗಿರಿಯ ಪಿಎಸ್ಐ ಪರಶುರಾಮ ಅವರ ಜೀವ ಹೋಗಿದೆ ಎಂದು ಆರೋಪಿಸಿದ್ದಾರೆ.

    ಭ್ರಷ್ಟತನದ ಪರಮಾವಧಿ ಮುಟ್ಟಿದ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೊಬ್ಬ ಪೊಲೀಸ್ ಅಧಿಕಾರಿಯನ್ನು ಬಲಿಪಡೆದಿದೆ. ಅತ್ಯಂತ ಬಡತನದ ಹಿನ್ನಲೆಯಿಂದ ಬಂದರೂ, ತನ್ನ ಛಲ ಮತ್ತು ಸಾಧನೆಯಿಂದ ಪಿಎಸ್ಐ ಆದ ಪರಶುರಾಮ್ ಛಲವಾದಿ ಯಾದಗಿರಿಯಲ್ಲಿ ನಿನ್ನೆ ಸಾವಿಗೀಡಾಗಿದ್ದಾರೆ. ಮೃತರ ಪತ್ನಿ ತನ್ನ ಪತಿಯ ಸಾವಿಗೆ, “ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಮಾಡಿದ ಒತ್ತಡದಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ”. ಈ ಸಾವಿಗೆ ಭ್ರಷ್ಟ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಸಾಮಾಜಿಕ ಜಾಲತಾಣ ‘X’ನಲ್ಲಿ ಸಿ.ಟಿ.ರವಿ ಪೋಸ್ಟ್ ಹಾಕಿದ್ದಾರೆ.

    ಮೃತ ಪಿಎಸ್ಐ ಪತ್ನಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರ ಹೆಸರೇಳಿದರೂ ಅವರನ್ಯಾಕೆ ಇನ್ನೂ ಬಂಧಿಸಿಲ್ಲ?? ನಿಮ್ಮ ಲಂಚದ ಹಾವಳಿಗೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿರುವ ಸಿ.ಟಿ.ರವಿ, ಕೂಡಲೇ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತವರ ಪುತ್ರನನ್ನು ಈ ಕೂಡಲೇ ಬಂಧಿಸಿ, ಮೃತ ಪಿಎಸ್ಐ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.

  • ಯಾದಗಿರಿ ಪಿಎಸ್​ಐ ಪರಶುರಾಮ್ ಅನುಮಾನಸ್ಪದ ಸಾವು; ಪ್ರಭಾವಿ ಶಾಸಕರ ಕೈವಾಡ ದಲಿತ ಸಂಘಟನೆಗಳ ಆಕ್ರೋಶ

    ಯಾದಗಿರಿ ಪಿಎಸ್​ಐ ಪರಶುರಾಮ್ ಅನುಮಾನಸ್ಪದ ಸಾವು; ಪ್ರಭಾವಿ ಶಾಸಕರ ಕೈವಾಡ ದಲಿತ ಸಂಘಟನೆಗಳ ಆಕ್ರೋಶ

    ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ ಪಿಎಸ್​ಐ ಪರಶುರಾಮ (34) ಎಂಬವರು ಶುಕ್ರವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಪ್ರಭಾವಿಗಳಿಂದ ಹಣಕ್ಕಾಗಿ ಒತ್ತಡ ಹೇರಲಾಗಿದ್ದು ಇದರಿಂದ ನೊಂದಿದ್ದ ಪಿಎಸ್​ಐ ಪರಶುರಾಮ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಪಿಎಸ್​ಐ ಪರಶುರಾಮ

    ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರು ತಮ್ಮ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪಿಎಸ್​ಐ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

    ಪಿಎಸ್​ಐ ಪರಶುರಾಮ ಅವರು ಯಾದಗಿರಿ ನಗರ ಠಾಣೆಗೆ ವರ್ಗಾವಣೆಗಾಗಿ ಸ್ಥಳೀಯ ನಾಯಕರು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 30 ಲಕ್ಷ ರೂ. ನೀಡಿ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದೊಳಗೆ ಅವರನ್ನು ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು ಎಂದು ಕುಟುಂಬಸ್ಥರು ದೂರಿದ್ದಾರೆ.

    ಈ ನಡುವೆ, ಪಿಎಸ್​ಐ ಸಾವಿಗೆ ಕಾರಣರಾಗಿರುವ ಶಾಸಕ ಚನ್ನಾರೆಡ್ಡಿ ಪಾಟೀಲ್​ಆವರನ್ನು ಬಂಧಿಸುವಂತೆ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.