Wednesday, October 7

ಎಲ್.ಕೆ. ಅಡ್ವಾಣಿ ಭೇಟಿ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಾಜಿ ಉಪ ಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಭೇಟಿಯ ಬಳಿಕ ಪ್ರಧಾನಿ ಮೋದಿ ಅವರು ‘ಎಕ್ಸ್‌’ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅಡ್ವಾಣಿ ಅವರ ದಶಕಗಳ ಸುದೀರ್ಘ ಸಾರ್ವಜನಿಕ ಸೇವೆ ಹಾಗೂ ರಾಷ್ಟ್ರ ಜೀವನಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದ ಅವರು, ದೇಶದ ಪ್ರಗತಿಗೆ ಅಡ್ವಾಣಿ ಅವರ ಸೇವೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.

“ಅವರ ದಶಕಗಳ ಸಾರ್ವಜನಿಕ ಸೇವೆ ಮತ್ತು ರಾಷ್ಟ್ರ ಜೀವನಕ್ಕೆ ನೀಡಿದ ಕೊಡುಗೆ ಅಳಿಸಲಾಗದ ಛಾಪು ಮೂಡಿಸಿದೆ” ಎಂದು ಮೋದಿ ತಿಳಿಸಿದ್ದಾರೆ.

ಭಾರತದ ಪ್ರಗತಿಯನ್ನು ಬಲಪಡಿಸುವಲ್ಲಿ ಅಡ್ವಾಣಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರಧಾನಿ ಇದೇ ವೇಳೆ ಸ್ಮರಿಸಿದ್ದಾರೆ.