ಜನಾನುರಾಗಿ, ಉದ್ಯಮಿ ರತನ್ ಟಾಟಾ ವಿಧಿವಶ

ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು.

1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ವನ್ನು ನೀಡಿ ಗೌರವಿಸಿತ್ತು.

ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.