Monday, February 16

RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

4 ದಶಕಗಳಿಂದ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ “ನಾಳೆ ಬಾ” ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಕಲ್ಯಾಣ ಕರ್ನಾಟಕದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರುವ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.