Sunday, December 7

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ.

ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪಟಾಕಿ ದುರಂತಗಳಿಗೆ ಅವಕಾಶ ನೀಡಬಾರದು. ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ರಾತ್ರಿ 8 ರಿಂದ 10 ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌