Wednesday, June 25

Tag: ಆಶಾ ಕಾರ್ಯಕರ್ತೆಯರ ವೇತನ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

Others
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ ಎಂದವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ...
ಅತ್ಯಾಚಾರ ಕೊಲೆ ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು; ಆಶಾ ಕಾರ್ಯಕರ್ತೆಯರ ಸಂಘ

ಅತ್ಯಾಚಾರ ಕೊಲೆ ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು; ಆಶಾ ಕಾರ್ಯಕರ್ತೆಯರ ಸಂಘ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೋಲ್ಕತ್ತಾದ ಆರ್ ಜಿ ಕರ್ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ನಡೆದ ಘೋರ ಅತ್ಯಾಚಾರ ಹಾಗೂ ಕೊಲೆಯನ್ನು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಖಂಡಿಸಿದೆ.  ಇಡೀ ದೇಶವನ್ನೇ ಬೆಚ್ಚಿ ಬೆಳೆಸುವ ಈ ಘಟನೆ ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವಂತೆ ಮಾಡಿದೆ ಎಂದು ಸಂಘ ಹೇಳಿದೆ. ನಮ್ಮ ಸಮಾಜವು ಇಂದು ಅತ್ಯಂತ ತೀವ್ರ ಸಾಂಸ್ಕೃತಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಮಹಿಳೆಯರ ಮೇಲೆ ಅಪರಾಧಗಳು ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ, 12-13 ವರ್ಷದ ಮೂವರು ಶಾಲಾ ಮಕ್ಕಳು 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅವಳನ್ನು ಕೊಂದರು. ಮುಂಬೈನಲ್ಲಿ ಕೂಡ ಇದೇ ವಯಸ್ಸಿನ ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಕಲ್ಕತ್ತಾದ ವೈದ್ಯಕೀಯ ಕಾಲೇಜೊಂದರಲ್ಲಿ ಪಾತಕಿಗಳ ಅಮಾನುಷ ಕೃತ್ಯಕ್ಕೆ ಬಲಿಯಾಗಿ ಘೋರ ಸಾವಿಗೀಡಾದ ವೈದ್ಯೆ ಈ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆಯಾಗಿದೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ...