Tuesday, March 17

Tag: ತುಂಗಭದ್ರ ಜಲಾಶಯ

ತುಂಗಭದ್ರಾ ಜಲಾಶಯ ಅವಘಡ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ, ಸಚಿವ ಡಿಕೆಶಿ ರಾಜೀನಾಮೆ ನೀಡಲಿ; ಕುರುಬೂರು ಆಗ್ರಹ

ತುಂಗಭದ್ರಾ ಜಲಾಶಯ ಅವಘಡ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ, ಸಚಿವ ಡಿಕೆಶಿ ರಾಜೀನಾಮೆ ನೀಡಲಿ; ಕುರುಬೂರು ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬಳ್ಳಾರಿ: ತುಂಗಭದ್ರಾ ಗೇಟ್ ಮುರಿದ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ. ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.‌ತುಂಗಭದ್ರಾ ಜಲಾಶಯ ಗೇಟ್ ಮುರಿದು ನೀರು ಖಾಲಿಯಾಗಿ ರೈತರ ಬದುಕು ಹಾಳಾಗಲು. ಸರ್ಕಾರದ ನಿರ್ಲಕ್ಷತನವೇ ಕಾರಣ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ದೂರಿದ್ದಾರೆ.ಕಳೆದ ಒಂದು ತಿಂಗಳಿಂದ ನಿರಂತರ ಮಳೆ. ಪ್ರವಾಹ ಬರುತ್ತಿದ್ದರೂ ಜಲಾಶಯಗಳ ಸುರಕ್ಷತೆ ಪ್ರವಾಹ ಹಾನಿ ಬಗ್ಗೆ ಗಂಭೀರ ಚಿಂತನೆ ನಡೆಸದೆ ಸರ್ಕಾರ ನಿರ್ಲಕ್ಷ್ಯ ತಾಳಿದೆ. ಇದು ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಬೇಜವಾಬ್ದಾರಿತನ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ಕರ್ನಾಟಕದ 4-5 ಜಿಲ್ಲೆಗಳ 22 ಲಕ್ಷ ಎಕ್ಟರ್ ನಲ್ಲಿ ಭತ್ತ ಬೆಳೆಯುತ್ತಿದ್ದ ರೈತರ ಬದುಕು ನಾಶವಾಗಲು ಕಾರಣವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ 70 ವರ್ಷಗಳ ಹಳೆಯದಾದ ಗೇಟ್‌ಗಳನ್ನು ಬದಲಾಯಿಸಬೇಕು ಈ ಬಗ್ಗೆ ನಿಗಾ ವಹಿಸುವಂತೆ ಒತ್ತಾಯ ಮಾಡುತ್ತಿದ್ದರೂ ನಿರ್ಲಕ್ಷ್ಯ ಮಾಡಿದ ನೀರಾ...