Saturday, May 2

Tag: ಮುಡಾ ಹಗರಣ

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಕಂಟಕ; ಕೆಐಎಡಿಬಿ ಹಗರಣ ಬಗ್ಗೆ ಇ.ಡಿ.ಗೆ ದೂರು; ಪ್ರಧಾನಿ ಮೋದಿ, ಷಾ ಅವರಿಗೂ ಅಹವಾಲು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ 'ದೇವನಹಳ್ಳಿ KIADB ಭೂಸ್ವಾಧೀನ ಅವ್ಯವಹಾರ' ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ಜಾರಿ ನಿರ್ದೇಶನಾಲಯ (ED)ದ ನಿರ್ದೇಶಕರಿಗೆ ದೂರು ಸಲ್ಲಿಕೆಯಾಗಿದೆ. 'ಸಿಟಿಜನ್ ರೈಟ್ಸ್ ಫೌಂಡೇಶನ್' ಈ ದೂರನ್ನು ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿರ್ದೇಶನ ಕೋರಿ ಕೇಂದ್ರ ಸರ್ಕಾರಕ್ಕೂ ದೂರು ಸಲ್ಲಿಕೆಯಾಗಿದೆ.ಕೈಗಾರಿಕೋದ್ಯಮಗಳನ್ನು ಉತ್ತೇಜಿಸಲು, ಉದ್ಯಮ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಸ್ಥಾಪಿಸಲಾಗಿರುವ ರಾಜ್ಯ ಸರ್ಕಾರದ ಅಧೀನದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಇದೀಗ ಹಗರಣಗಳ ಕೂಪವಾಗಿದ್ದು, ಒಂದೊಂದೇ ಕರ್ಮಕಾಂಡಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಸರ್ಕಾ...

ಮುಡಾ ನಿವೇಶನ ಅಕ್ರಮ ಆರೋಪ; ಸಿಎಂಗೆ ಲೋಕಾಯುಕ್ತ ನೋಟೀಸ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಆರೋಪ ಕುರಿತಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಮೊದಲ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ವಿಚಾರಣೆಗೆ ಗುರಿಪಡಿಸಿರುವ ಲೋಕಾಯುಕ್ತ ಪೊಲೀಸರು ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೂ ನೋಟಿಸ್ ಜಾರಿ ಮಾಡಿದ್ದಾರೆ.ನವೆಂಬರ್ 6ರಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ.  ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ "ಜನಾಂದೋಲನ" ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ.ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ ತಿಳಿದುಬಂದಿದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆಮುಖ್ಯಮಂತ್ರ...
ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು‌ ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ...