
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು
ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣೆಯಲ್ಲಿ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೇಶ್ ಅವರು ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಆರೋಪ ಎಂದಿದ್ದ ಕಮಿಷನರ್
ಸಂದೇಶ್ ವಿರುದ್ಧ ಕೆಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪ ಸುಳ್ಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದರು. ಮುನ್ನವೇ, ಸಂತ್ರಸ್ತರ ಹೇಳಿಕೆ ದಾಖಲಿಸುವ ಮುನ್ನವೇ, ಪೊಲೀಸ್ ಆಯುಕ್ತರು ಇನ್ಸ್ಪೆಕ್ಟರ್'ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ಬೆನ್ನಲ್ಲೇ ಈ...
