Saturday, December 6

Tag: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ

ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು

ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆಶಾ ಕಾರ್ಯಕರ್ತರನ್ನು ಹೆದರಿಸುವ ಸರ್ಕಾರದ ಪ್ರಯತ್ನ ಸಫಲವಾಗದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ. ಆಶಾ ಕಾರ್ಯಕರ್ತೆಯರ ಹೋರಾಟವನ್ನು ಮೊಟಕುಗೊಳಿಸುವ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರ ಶೋಷಣೆಗೆ ಗುರಿಪಡಿಸುತ್ತಿರುವ ಬಗ್ಗೆ ಮನವರಿಕೆ ಮಾಡಿದ್ದಾರೆ. ಆಶಾ ಕಾರ್ಯಕರ್ತರ ಹಲವಾರು ಸಮಸ್ಯೆಗಳ ಬಗ್ಗೆ ಹಾಗೂ ಆಶಾಗಳ ಸೇವೆಯ ಮಹತ್ವದ ಬಗ್ಗೆ ಸರ್ಕಾರಕ್ಕೆ ಮಾರಿಕೆ ಮಾಡಿದ್ದಾರೆ. ನಿಮ್ಮ ಸುದ್ದಿ ಈಗ ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ.. ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಮುಷ್ಕರ ಕೈಬಿಡಲು ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಹೆದರಿಸುವ ಕ್ರಮವಲ್ಲದೆ ಇನ್ನೇನೂ ಅಲ್ಲ. ಸುಮಾರು 15 ವರ್ಷಗಳಿಂದ ಅತ್ಯಂತ ಕನಿಷ್ಠ ಸಂಭಾವನೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾಗಳು ಜನತೆಯ ಆರೋಗ...
ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸುದೀರ್ಘ ಕಾಲದ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು 07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ರವಾನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ ಅನಿವಾರ್ಯ.. ಸುತ್ತೋಲೆಯಲ್ಲಿ ಏನಿದೆ? ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನ...
ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಇದೀಗ ಸಿದ್ದರಾಮಯ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 'ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ' ರಾಜ್ಯ ಮಟ್ಟದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಘೋಷಿಸಿದೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 15,000 ಗೌರವಧನ ನೀಡಬೇಕು ಎಂಬ ಬಹುದಿನಗಳ ಬೇಡಿಕೆಯೂ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಹಗಲಿರುಳು ಗ್ರಾಮಾಂತರದ ಮತ್ತು ನಗರದ ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್...