Sunday, December 7

Tag: ನಿಖಿಲ್ ಕುಮಾರಸ್ವಾಮಿ

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ? ಡಿಕೆಶಿ ಕೊಟ್ಟ ಉತ್ತರ ಇದು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ತಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದೇಕೆ ಎಂಬ ಬಗ್ಗೆ ಈಗಿನ್ನೂ ಚರ್ಚೆ ಸಾಗಿದೆ. ಕಾಂಗ್ರೆಸ್ ನಾಯಕರ ಪಿತೂರಿಯಿಂದಲೇ ನಿಖಿಲ್ ಸೋತಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ನಿಖಿಲ್ ತಂದೆ ಕುಮಾರಸ್ವಾಮಿಯವರೂ ಅದೇ ರೀತಿಯ ವ್ಯಾಖ್ಯಾನವನ್ನು ನೀಡಿ ಕಾಂಗ್ರೆಸ್ ನಾಯಕರ ಉಬ್ಬೇರಿಸುವಂತೆ ಮಾಡಿದ್ದಾರೆ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ತಮ್ಮದೇ ದಾಟಿಯಲ್ಲಿ ಉತ್ತರ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಮನಗರದಲ್ಲಿ ಕುಮಾರಸ್ವಾಮಿ ಅವರೂ ಶಾಸಕರಾಗಿದ್ದರು, ಮುಖ್ಯಮಂತ್ರಿಯೂ ಆದರು. ಅವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರು ಕೂಡ ಶಾಸಕರಾಗಿದ್ದರು. ಆದರೂ ನಿಖಿಲ್ ರಾಮನಗರದಲ್ಲಿ ಯಾಕೆ ಸೋತರು? ಅವರು ಕೆಲಸ ಮಾಡಿದ್ದರೆ ಜನ ಸೋಲಿಸುತ್ತಿದ್ದರಾ? ಕೆಲಸ ಮಾಡಿ, ಜನರ ಸೇವೆ ಮಾಡಿದ್ದರೆ ಸೋಲುತ್ತಿರಲಿಲ್ಲ. 5 ವರ್ಷಕ್ಕೊಮ್ಮೆ ಬಂದು ಮತ ನೀಡಿ ಎಂದರೆ ಹೇಗೆ? ಮತದಾರರು ಏನು ಕೂ...