
ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ
ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. 'ಚೆಂಡು ಉತ್ಸವದ ನಾಡು' ಎಂದೇ ಗುರುತಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಶತಮಾನದ ನಂತರ ಶತಚಂಡಿಕಾಯಾಗ ನಡೆಯುತ್ತಿದೆ.
ಇದು ನಿಜಕ್ಕೂ ಅಪೂರ್ವ ಹಾಗೂ ಅನನ್ಯ ಕೈಂಕರ್ಯ. ಸುಮಾರು 105 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಇಂತಹಾ ಚಂಡಿಕಾ ಯಾಗ ನಡೆದಿತ್ತು. ಲೋಕ ಕಲ್ಯಾಣಾರ್ಥವಾಗಿ ನೆರವೇರುತ್ತಿರುವ ಈ ಶತಚಂಡಿಕಾಯಾಗದಲ್ಲಿ ದೇಶದ ವಿವಿಧೆಡೆಯ ಯತಿಗಳು ಭಾಗಿಯಾಗುತ್ತಿದ್ದಾರೆ. ಚೆಂಡು ಉತ್ಸವ ಸಂದರ್ಭದ ಜನೋತ್ಸಾಹಕ್ಕೆ ಈ ಶತಚಂಡಿಕಾಯಾಗದ ಸಡಗರ ಸಾಕ್ಷಿಯಾಗುತ್ತಿರುವುದು ವಿಶೇಷ.
ಮಾರ್ಚ್ 5ರ ಬೆಳಿಗ್ಗೆ 6 ರಿಂದ ಶತಚಂಡಿಕಾಯಾಗ ಆರಂಭವಾಗಲಿದ್ದು, ಮಧ್ಯಾಹ್ನ ಗಂಟೆ 12ಕ್ಕೆ ಪೂರ್ಣಾಹುತಿ ನೆರವೇರಲಿದೆ. ಮರುದಿನ, ಮಾರ್ಚ್ 6, ಗುರುವಾರ 'ದೊಡ್ಡ ರಂಗಪೂಜೆ' ಉತ್ಸವ ನೆರವೇರಲಿದೆ.
ಮಾರ್ಚ್ 1 ರಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ವಿವಿಧ ಕೈಂಕರ್ಯಗಳು ನೆರವೇರುತ್ತಿವೆ. ಮಾರ್ಚ್ 5 ರಂದು ಬುಧವಾರ ಶತಚಂಡಿಕಾಯಾಗ ...