Tag: ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ

  • ‘ಮೈಸೂರು ಪಾದಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು..

    ರಾಮನಗರ: ಮುಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸಿತ್ತಿರುವ ಪಾದಯಾತ್ರೆ ನಡುವೆ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಬಿಜೆಪಿ- ಜೆಡಿಎಸ್​ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸತ್ತಿದ್ದು, ಮೂರನೇ ದಿನವಾದ ಸೋಮವಾರ ಈ ಜಾಥಾ ರಾಮನಗರ ಜಿಲ್ಲೆ ಪ್ರವೇಶಿಸಿದೆ. ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

    ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಅವರು ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದು, ಕೂಡಲೇ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಾಗಲೇ ಅವರು ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಕಾರ್ಯಕರ್ತೆಯ ನಿಧನಕ್ಕೆ ಬಿಜೆಪಿ-ಜೆಡಿಎಸ್ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ.

  • ’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ, 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದ ಹೆಚ್ಡಿಕೆ, ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು.

    ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ. ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು. ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ ಎಂದು ಶಿವಕುಮಾರ್ ಅವರೇ ಹೇಳಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ಶಿವಕುಮಾರರ ಆಸ್ತಿ ಹಿಂದೆ ಎಷ್ಟಿತ್ತು? ಒಂದು ಬ್ಲಾö್ಯಕ್ ಆಂಡ್ ವೈಟ್ ಟಿವಿ, ಡಿವಿಡಿ ಇದ್ದುದನ್ನು ಅವರ ಗುರುಗಳೇ ಹೇಳಿದ್ದಾರೆ. ಅದರ ಮೂಲಕ ಏನನ್ನು ಪ್ರದರ್ಶನ ಮಾಡಿದ್ದರು, ಅದರಿಂದ ಸಾವಿರಾರು ಕೋಟಿ ಪಡೆದರೇ ಎಂದು ಪ್ರಶ್ನಿಸಿದರು.

    ಇದೇ ವೇಳೆ, ಯಾದಗಿರಿಯಲ್ಲಿ ಪೊಲೀಸ್ ಅಧಿಕಾರಿ ಸಾವಿನ ಬಗ್ಗೆ, ಅಧಿಕಾರಿಯ ಪತ್ನಿಯ ಆರೋಪಕ್ಕೆ ಡಾ.ಪರಮೇಶ್ವರ್ ಉತ್ತರಿಸಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದರು.