Sunday, March 15

Tag: ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವಾಗಲೇ ಇತ್ತ ರಾಜಧಾನಿ‌ ಬೆಂಗಳೂರು ಬಳಿ ಪೊಲೀಸ್ ಇನ್‌ಸ್ಪೆಕ್ಟರ್ ಸಾವಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ.ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ಅಧಿಕಾರಿ ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಸಾವಿಗೆ ಕಾರಣ ಏನೆಂಬ ಬಗ್ಗೆ ಏನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ....