ಜ. 21ರಂದು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ; ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಉಪಸ್ಥಿತಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ್, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ...
