Tag: ವಿನೇಶ್ ಪೋಗಟ್

  • ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

    ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ ನಲುಗಿಸದೆ. ಈ ಬಗ್ಗೆ ಕ್ರೀಡಾಪಟುಗಳು ದುಃಖ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಾಗಿರುವ ಕಹಿ ಅನುಭವದ ನಂತರ ವಿನೇಶ್ ಪೊಗಟ್ ಅವರು ಒಲಿಂಪಿಕ್ಸ್‌ಗೆ ವಿದಾಯ ಹೇಳಿದ್ದಾರೆ.

    ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪೋಗಟ್, ‘ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ನೋವು ಹಂಚಿಕೊಂಡಿದ್ದಾರೆ.

    ಕುಸ್ತಿಗೆ ವಿದಾಯ ಹೇಳುತ್ತಿದ್ದೇನೆ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ಅವರು Xನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.