Wednesday, June 25

Tag: ಶರಣ್ ಪ್ರಕಾಶ್ ಪಾಟೀಲ್

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಯಚೂರು: ಸಚಿವ ಸಂಪುಟದ ನಿರ್ಣಯದ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯುಷನ್‌)ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ತಕ್ಷಣವೇ ಕೇಂದ್ರ ಸರ್ಕಾರ ವಾಪಸ್‌‍ ಕರೆಸಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ, ಕೌಶಲ್ಯಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ಒತ್ತಾಯಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಸಚಿವ ಸಂಪುಟದ ತೀರ್ಮಾನವನ್ನು ರಾಜ್ಯಪಾಲರು ಒಪ್ಪಿಕೊಳ್ಳಬೇಕು. ಆದರೆ ಸಂಪುಟದ ತೀರ್ಮಾನವನ್ನು ತಿರಸ್ಕರಿಸಿ ಅನುಮತಿ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು. ರಾಜ್ಯಪಾಲರು ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ಸರ್ಕಾರ 60 ಪುಟಗಳ ಸಮರ್ಪಕ ಉತ್ತರ ನೀಡಿದೆ. ಇದನ್ನು ಪರಿಶೀಲಿಸ...