Saturday, December 6

Tag: ಸಚಿವ ರಾಮಲಿಂಗ ರೆಡ್ಡಿ

BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು ಎಂದು ಬೊಟ್ಟು ಮಾಡಿರುವ ರಾಮಲಿಂಗಾ ರೆಡ್ಡಿ, ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು ಎಂದು ಗಮನಸೆಳೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ರಾಮಲಿಂಗಾ ರೆಡ್ಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಹೆಚ್ಚಳ ಮಾಡಿದಾಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ? ಎಂದು ಎದಿರೇಟು ನೀಡಿದ್ದಾರೆ. ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ? ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತ...