
‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..
ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ. ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ
ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ 'X'ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಶಕ್ತಿ' ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ.
ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್...