Sunday, March 15

Tag: ಸಿದ್ದರಾಮಯ್ಯ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ.ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು.ಆಗ ಸಚಿವರು ಮಾತನಾಡಿ,...
ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಮಾಹಿತಿ ಹೀಗಿದೆ: ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದವರು ಮಾಹಿತಿ ನೀಡಿದ್ದಾರೆ. ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು....
ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

ಲಾಭಿಗೆ ಮಣಿದು RGUHSಗೆ ಭ್ರಷ್ಟರನ್ನು ಕುಲಪತಿ ಮಾಡಿದರೆ ಜೋಕೆ; ಸರ್ಕಾರಕ್ಕೆ CRF ಪರೋಕ್ಷ ಎಚ್ಚರಿಕೆ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ 'ಸಿಟಿಜನ್ ರೈಟ್ಸ್ ಫೌಂಡೇಶನ್' ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ 'ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ.ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಬೇಕೆಂದು ಕೆ...
ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೆಐಎಡಿಬಿ ಕರ್ಮಕಾಂಡ; ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು..  ಸಿದ್ದು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು.. ಹಂದಿಗುಂದ ಎತ್ತಂಗಡಿಗೆ ಆಗ್ರಹ.. ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ 'ಪೇ ಸಿಎಂ ಸೇ ಸಿಎಂ' ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ 'ಹಂದಿಗುಂದ ಪ್ರಕರಣ' ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಶನ್' ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ.ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ...
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

Others
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ ಎಂದವರು ತಿಳಿಸಿದ್ದಾರೆ.ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ...
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ.ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ.ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು.ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು....
ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಅರ್ಜಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.ಈ ನಡುವೆ ರಾಜ್ಯಪಾಲರು ಶೋಕಾಸ್ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ ಎಂದು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು. ತಪ್ಪು ಮಾಡಿದ್ದರೆ ತಾನೇ ಹೆದರುವುದು ಎಂದರು.ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರವನ್...